ಬೆಂಗಳೂರು: ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಆರ್ಎಸ್ಎಸ್ ಪ್ರಾರ್ಥನಾ ಗೀತೆ ಹಾಡಿದ್ದಕ್ಕೆ ಬಿಜೆಪಿ ಹಾಗೂ ಆರ್ಎಸ್ಎಸ್ ಜತೆ ಕೈಜೋಡಿಸುವ ಬಗ್ಗೆ ನಡೆಯುತ್ತಿರುವ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಅವರು ಶುಕ್ರವಾರ ಪ್ರತಿಕ್ರಿಯಿಸಿದ್ದಾರೆ.

‘ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜೆಡಿಎಸ್, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ಎಸ್ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ’ ಎಂದಿದ್ದಾರೆ.
.ವಿಡಿಯೊ ನೋಡಿ: ನಮಸ್ತೆ ಸದಾ ವತ್ಸಲೆ... ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆಶಿ.ದೇಶಕ್ಕೆ ದೊಡ್ಡ ಗೌಡರ ಕೊಡುಗೆ ಏನು? ಡಿಕೆಶಿ.
ಶಿಕ್ಷಣ ಸಂಸ್ಥೆಗಳಲ್ಲಿ ಹಣ ಹೂಡಿರುವ ಆರ್ಎಸ್ಎಸ್

'ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್ಎಸ್ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. ಸಂಘವು ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ’ ಎಂದರು.

‘ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಹೀಗಾಗಿ ಆರ್ಎಸ್ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ’ ಎಂದು ಶಿವಕುಮಾರ್ ಸ್ಪಷ್ಟಪಡಿಸಿದರು.

‘ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ನಿಮ್ಮಲ್ಲೂ (ಮಾಧ್ಯಮ) ಒಬ್ಬೊಬ್ಬರದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವನ್ನು ನಾವು ಗಮನಿಸಬೇಕಲ್ಲವೇ?’ ಎಂದು ಉದಾಹರಣೆ ಸಹಿತ ವಿವರಿಸಿದರು.

ಬಿಜೆಪಿ ಠುಸ್ ಗಿರಾಕಿ

ಬಿಜೆಪಿಯ ಧರ್ಮಸ್ಥಳ ಯಾತ್ರೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ್ಮ ಕೆಲಸ ನಿರ್ವಹಿಸುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.