ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಡಿಯೂರಪ್ಪ ಪ್ರಕರಣದ ಮಾಹಿತಿ ಇಲ್ಲ: ಡಿ.ಕೆ. ಶಿವಕುಮಾರ್‌

Published 13 ಜೂನ್ 2024, 16:14 IST
Last Updated 13 ಜೂನ್ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿ.ಎಸ್‌. ಯಡಿಯೂರಪ್ಪ ಮೇಲಿನ ಪೋಕ್ಸೊ ಪ್ರಕರಣವನ್ನು ಗೃಹ ಸಚಿವಾಲಯ ನಿಭಾಯಿಸಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಯಡಿಯೂರಪ್ಪ ಬಂಧನಕ್ಕೆ ಕೋರ್ಟ್ ವಾರೆಂಟ್ ಜಾರಿ ಮಾಡಿರುವ ಬಗ್ಗೆ ಕೇಳಿದಾಗ, ‘ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ’ ಎಂದರು. 

ನನ್ನನ್ನು ಯಾರೂ ಸಂಪರ್ಕಿಸಿಲ್ಲ: ‘ನಟ ದರ್ಶನ ಪ್ರಕರಣ ಮುಚ್ಚಿಹಾಕಲು ಸಚಿವರು ಯಾರಾದರೂ ಒತ್ತಡ ಹಾಕಿದ್ದಾರಾ’ ಎಂಬ ಪ್ರಶ್ನೆಗೆ, ‘ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಅವರ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ವಿಚಾರಿಸುತ್ತೇನೆ’ ಎಂದರು.

‘ಈ ಪ್ರಕರಣದಲ್ಲಿ ಪೊಲೀಸ್ ಠಾಣೆಯನ್ನು ಶಾಮಿಯಾನ ಮೂಲಕ ಮುಚ್ಚಲಾಗಿದೆ. ಈ ಪ್ರಕರಣದಲ್ಲಿ ಸತ್ಯಾಂಶ ಮರೆಮಾಚುವ ಪ್ರಯತ್ನ ನಡೆಯುತ್ತಿದೆಯೇ‘ ಎಂಬ ಪ್ರಶ್ನೆಗೆ, ‘ನನ್ನ ಪ್ರಕರಣದ ಅನುಭವದಲ್ಲೇ ಹೇಳುವುದಾದರೆ, ಅಧಿಕಾರಿಗಳು ನನ್ನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವಾಗ ಜನರಿಗೆ ಮರೆಮಾಚಿ ಕರೆದುಕೊಂಡು ಹೋಗುತ್ತಿದ್ದರು. ಕೆಲವು ಬಾರಿ ಅಭಿಮಾನಿಗಳು ಅಡ್ಡಬರುವುದು, ಜೈಕಾರ ಕೂಗುವುದು ಅಥವಾ ಯಾರಾದರೂ ಕಲ್ಲು ಎಸೆಯಬಹುದು ಎಂಬ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ಆ ರೀತಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪೊಲೀಸರು ಇದೇ ರೀತಿ ಮುನ್ನಚ್ಚರಿಕೆ ಕ್ರಮ ತೆಗೆದುಕೊಂಡಿರಬಹುದು. ನನಗೆ ಮಾಹಿತಿ ಇಲ್ಲ’ ಎಂದರು.

‘ಈ ಪ್ರಕರಣವನ್ನು ರಾಜ್ಯ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸಿದರೆ ನಾನು ಮಧ್ಯಪ್ರವೇಶಿಸಬೇಕಾಗುತ್ತದೆ’ ಎಂಬ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರ ಎಚ್ಚರಿಕೆ ಬಗ್ಗೆ ಕೇಳಿದಾಗ, ‘ಯಾರು ಬೇಕಾದರೂ ಮಧ್ಯಪ್ರವೇಶಿಸಲಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT