ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

NEP | ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುತ್ತೇವೆ ಎಂಬ ಮಾತಿಗೆ ಬದ್ಧ: ಡಿಕೆಶಿ

Published 18 ಆಗಸ್ಟ್ 2023, 6:55 IST
Last Updated 18 ಆಗಸ್ಟ್ 2023, 6:55 IST
ಅಕ್ಷರ ಗಾತ್ರ

ಬೆಂಗಳೂರು: ಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದು ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು. ಆ‌ ಮಾತಿಗೆ ನಾವು ಬದ್ಧರಾಗಿದ್ದೇವೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಶಿವಕುಮಾರ್, ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ? ಗುಜರಾತ್, ಉತ್ತರ ಪ್ರದೇಶದಲ್ಲಿ ಏಕೆ ಎನ್ಇಪಿ ಜಾರಿ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದಲ್ಲಿರುವ ಶಿಕ್ಷಣ ವ್ಯವಸ್ಥೆ ದೇಶಕ್ಕೇ ಮಾದರಿಯಾಗಿದೆ. ಅದರಿಂದಾಗಿಯೇ ಇಂದು ಬೆಂಗಳೂರು ಐಟಿ ರಾಜಧಾನಿಯಾಗಿರುವುದು. ರಾಜ್ಯದಲ್ಲಿನ ಅದೆಷ್ಟೋ ಜನ ವಿದೇಶದಲ್ಲಿ ಒಳ್ಳೆಯ ಸ್ಥಾನದಲ್ಲಿದ್ದಾರೆ. ಅದಕ್ಕೂ ನಮ್ಮ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT