ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗಮ-ಮಂಡಳಿ | ಶಾಸಕರು, ಕಾರ್ಯಕರ್ತರಿಗೆ ಸ್ಥಾನ: ಡಿ. ಕೆ. ಶಿವಕುಮಾರ್

Published 22 ನವೆಂಬರ್ 2023, 0:28 IST
Last Updated 22 ನವೆಂಬರ್ 2023, 0:28 IST
ಅಕ್ಷರ ಗಾತ್ರ

ಬೆಂಗಳೂರು: 'ಪಕ್ಷ ಸಂಘಟನೆ ಮತ್ತು ನಿಗಮ ಮಂಡಳಿಗಳಿಗೆ ಶಾಸಕರು ಮತ್ತು ಕಾರ್ಯಕರ್ತರ ನೇಮಕ ಕುರಿತು ನಮ್ಮ ನಾಯಕರ ಜೊತೆ ಚರ್ಚೆ ಮಾಡಲಾಗಿದೆ' ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು.

ನಿಗಮ- ಮಂಡಳಿ ನೇಮಕ ಮತ್ತಿತರ ವಿಚಾರಗಳ ಕುರಿತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಸಮಾಲೋಚನೆ ನಡೆಸಿದ ನಂತರ ತಾಜ್ ವೆಸ್ಟೆಂಡ್ ಬಳಿ ಮಂಗಳವಾರ ಮಧ್ಯರಾತ್ರಿ ಅವರು ಮಾತನಾಡಿದರು.

'ಶಾಸಕರಿಗೆ ಜವಾಬ್ದಾರಿ ನೀಡುವ ಬಗ್ಗೆ ಮೊದಲ ಸುತ್ತಿನ ಚರ್ಚೆ ಆಗಿದ್ದು, ಈಗಿನ ಪಟ್ಟಿಯನ್ನು ಕೇಂದ್ರ ನಾಯಕರು ಪರಿಶೀಲಿಸಲಿದ್ದಾರೆ. ನಂತರ ಎರಡನೇ ಸುತ್ತಿನ ಚರ್ಚೆ ಆಗಲಿದೆ" ಎಂದರು

ನೇಮಕ ಪ್ರಕ್ರಿಯೆ ಪೂರ್ಣಗೊಳ್ಳಲು ಎಷ್ಟು ಸಮಯಾವಕಾಶ ಬೇಕು ಎಂಬ ಪ್ರಶ್ನೆಗೆ, 'ಪಂಚರಾಜ್ಯ ಚುನಾವಣೆ ನಡೆಯುತ್ತಿದ್ದು, ಮುಖ್ಯಮಂತ್ರಿ ಮತ್ತು ನಾನು ಪ್ರಚಾರಕ್ಕೆ ಹೋಗಬೇಕಿದೆ. ಆದಷ್ಟು ಬೇಗ ಈ ಪ್ರಕ್ರಿಯೆ ಮಾಡುತ್ತೇವೆ" ಎಂದರು.

ಗೃಹ ಸಚಿವ ಜಿ. ಪರಮೇಶ್ವರ ಮುನಿಸಿಕೊಂಡಿದ್ದಾರೆ ಎಂಬ ಬಗ್ಗೆ ಚರ್ಚೆ ಆಗುತ್ತಿದೆಯಲ್ಲ ಎಂದು ಕೇಳಿದಾಗ, "ಗೃಹಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಬೆಳಗಾವಿಯಿಂದ ಬಂದು ಚರ್ಚೆ ಮಾಡಿದ್ದಾರೆ. ಯಾರು ಯಾಕೆ ಮುನಿಸಿಕೊಳ್ಳುತ್ತಾರೆ" ಎಂದು ಕೇಳಿದರು.

ಲೋಕಸಭೆ ಚುನಾವಣೆ ಸಂಬಂಧದ ವರದಿ ಬಗ್ಗೆ ಕೇಳಿದಾಗ, "ಕೆಲವರು ತಮ್ಮ ವರದಿ ನೀಡಿದ್ದು, ಮತ್ತೆ ಕೆಲವರು ಇನ್ನಷ್ಟೇ ನೀಡಬೇಕಿದೆ" ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT