ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆ | ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಾತ್ರಿ ಸಂಚಾರ ನಡೆಸುತ್ತೇನೆ: ಡಿಕೆಶಿ

Published : 21 ಸೆಪ್ಟೆಂಬರ್ 2024, 16:15 IST
Last Updated : 21 ಸೆಪ್ಟೆಂಬರ್ 2024, 16:15 IST
ಫಾಲೋ ಮಾಡಿ
Comments

ಬೆಂಗಳೂರು: ‘ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯ ಗುಣಮಟ್ಟ ವೀಕ್ಷಿಸಲು ರಾತ್ರಿ ಸಂಚಾರ ನಡೆಸುತ್ತೇನೆ. 2–3 ದಿನಗಳಲ್ಲಿ ದಿನಾಂಕ ತಿಳಿಸುತ್ತೇನೆ’ ಎಂದು ಬೆಂಗಳೂರು ಅಭಿವೃದ್ದಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಎಷ್ಟು ರಸ್ತೆ ಗುಂಡಿಗಳಿವೆ ಎಂಬುದರ ಬಗ್ಗೆ ನನ್ನ ಬಳಿ ಲೆಕ್ಕವಿದೆ. ಅಭಿಯಾನದ ರೀತಿ ಕೆಲಸ ಮಾಡಿದ್ದೇವೆ. ಇದು ಜವಾಬ್ದಾರಿ. ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಆದೇಶ ಕೊಟ್ಟ ಮೇಲೆ ಅಧಿಕಾರಿಗಳು ಇಷ್ಟು ತ್ವರಿತವಾಗಿ ಕೆಲಸ ಮಾಡಿದ್ದನ್ನು ನಾನು ನೋಡಿಲ್ಲ’ ಎಂದರು.

‘ರಸ್ತೆಗುಂಡಿಗಳನ್ನು ಮುಚ್ಚಿಸುವ ವಿಚಾರದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಗಲು- ರಾತ್ರಿ ಕೆಲಸ ಮಾಡುತ್ತಿದ್ದಾರೆ. ಎಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು. ಮಧ್ಯೆ ಮಳೆ ಬಂದಿದೆ. ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕೆಂಬ ಕಾರಣಕ್ಕೆ ನಾವು ಬದ್ಧತೆಯಿಂದ ಕೆಲಸ ಮಾಡಿದ್ದೇವೆ’ ಎಂ‌ದರು.

ಅವಮಾನ ಮಾಡಲು ಇಷ್ಟವಿಲ್ಲ: ‘ನಾನು ಹಲವು ರಾಜ್ಯಗಳಿಗೆ ಭೇಟಿ ನೀಡಿದ್ದೇನೆ. ಅಲ್ಲಿನ ರಸ್ತೆಗಳ ವಿಡಿಯೊಗಳನ್ನು ಹಂಚಿಕೊಂಡರೆ, ಆ ರಾಜ್ಯಗಳಿಗೆ ಅವಮಾನವಾಗುತ್ತದೆ. ಅದಕ್ಕಿಂತ ಉತ್ತಮವಾಗಿ ನಮ್ಮವರು ಇಲ್ಲಿನ ರಸ್ತೆಗಳ ದುರಸ್ತಿ ಕೆಲಸ ಮಾಡಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT