ಬೆಂಗಳೂರು: ‘ನಾನು ಸ್ಟ್ರೀಟ್ ಫೈಟರ್. ಹೇಗೆ ಹೋರಾಟ ಮಾಡಬೇಕು ಎಂದು ನನಗೆ ಗೊತ್ತಿದೆ. ನನ್ನ ಹೋರಾಟ ಪಕ್ಷದ ಒಳಗಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

‘ಇತ್ತೀಚೆಗೆ ನೀವು ಯೋಗಿಯಂತೆ ಮಾತನಾಡುತ್ತಿದ್ದೀರಿ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನನ್ನ ಹೋರಾಟ ಪಕ್ಷದ ಹೊರಗೆ. ಹಾಗೆಂದು ಅಧಿಕಾರಕ್ಕಾಗಿ ಅಲ್ಲ. ನಾನು ಸುಮ್ಮನಾಗಿದ್ದೇನೆಂದು ಭಾವಿಸಿದರೆ, ಅದು ಅವರಿಗೆ ಬಿಟ್ಟ ವಿಚಾರ’ ಎಂದು ಮಾರ್ಮಿಕವಾಗಿ ನುಡಿದರು.

‘ಸ್ವಾರ್ಥಕ್ಕಾಗಿ ನಾನು ಎಂದೂ ಬ್ಲ್ಯಾಕ್ಮೇಲ್ ಮಾಡುವುದಿಲ್ಲ. ಪಕ್ಷಕ್ಕೆ ತೊಂದರೆಯನ್ನೂ ಮಾಡುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

‘ಪಕ್ಷದ ಅಧ್ಯಕ್ಷನಾಗಿ ನನ್ನ ಜವಾಬ್ದಾರಿಗಳು ತಿಳಿದಿವೆ. ಈ ಪಕ್ಷಕ್ಕೆ ನನ್ನಿಂದ ಯಾವುದೇ ಕಾರಣಕ್ಕೂ ಧಕ್ಕೆ, ಶಿಸ್ತು ಉಲ್ಲಂಘನೆ ಆಗಬಾರದು. ಅಧ್ಯಕ್ಷ ಸ್ಥಾನದಲ್ಲಿ ಕುಳಿತು, ಆ ಸ್ಥಾನಕ್ಕೆ ಅನ್ಯಾಯ ಮಾಡಬಾರದು. ನನ್ನಿಂದ ತಪ್ಪಾಗಿದೆ ಎಂದು ಬೇರೆಯವರು ನನ್ನ ಕಡೆ ಬೆರಳು ತೋರಿಸಬಾರದು. ನಾನು ತಾಳ್ಮೆಯಿಂದ ಇದ್ದೇನೆ’ ಎಂದರು.

‘ಬಜೆಟ್ ನಂತರ ಕ್ರಾಂತಿ ಮಾಡುತ್ತೀರಾ’ ಎಂಬ ಪ್ರಶ್ನೆಗೆ, ‘ಯಾಕೆ ಕ್ರಾಂತಿ ಮಾಡಲಿ. ನನಗೆ ನನ್ನ ಮೇಲೆ ನಂಬಿಕೆ ಇದೆ. ನಾನು ಭರವಸೆ ಮೇಲೆ ಬದುಕುತ್ತೇನೆ. ನನಗೆ ಯಾವಾಗ ಯಾವುದು ಬರಬೇಕೊ ಅದು ಬರುತ್ತದೆ. ಆ ಆತ್ಮವಿಶ್ವಾಸ ನನಗಿದೆ’ ಎಂದರು.

‘ನಾನು ಇದುವರೆಗೂ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿಲ್ಲ. ನನ್ನ ವಿಚಾರದಲ್ಲಿ ನಾನುಂಟು, ಮುಖ್ಯಮಂತ್ರಿ ಉಂಟು, ಪಕ್ಷದ ಹೈಕಮಾಂಡ್ ಉಂಟು. ಕೆಲವು ನಿರ್ಧಾರ ಕೈಗೊಂಡಾಗ ನಾನು ಭಾಗಿಯಾಗಿದ್ದೆ ಎಂದು ಹೇಳಿರುವುದು ಬಿಟ್ಟರೆ, ಯಾವುದೇ ಹೇಳಿಕೆ ನೀಡಿಲ್ಲ. ಮುಖ್ಯಮಂತ್ರಿ ಹುದ್ದೆ ಖಾಲಿಯಾಗುತ್ತದೆ. ಮುಖ್ಯಮಂತ್ರಿ ಹುದ್ದೆಯಿಂದ ಇಳಿಯುತ್ತಾರೆ. ದಲಿತರಿಗೆ ಮುಖ್ಯಮಂತ್ರಿ ಹುದ್ದೆ ಸಿಗಬೇಕು, ಬೇರೆಯವರಿಗೆ ಸಿಗಬೇಕು ಎಂದು ಎಲ್ಲಿಯೂ ಹೇಳಿಲ್ಲ. ಮುಖ್ಯಮಂತ್ರಿ ಹುದ್ದೆ ಖಾಲಿ ಮಾಡಿಸಲು ಹೊರಟಿರುವವರು ಬೇರೆಯವರು. ಖಾಲಿಯಾದರೆ ಅಲ್ಲವೇ ಬೇರೆಯವರಿಗೆ ನೀಡುವುದು’ ಎಂದರು.

‘ಶಾಸಕರ ಹೇಳಿಕೆ ನೋಡಿದರೆ ಇದಕ್ಕೆ ತದ್ವಿರುದ್ಧವಾಗಿದೆ’ ಎಂದಾಗ, ‘ನನಗೆ ಒಳ್ಳೆಯದಾಗಬೇಕು ಎಂಬ ಆಸೆ ಶಾಸಕರಿಗೆ ಇದ್ದರೆ, ಸುಮ್ಮನಿದ್ದು ಬಿಡಿ ಎಂದು ಅವರಿಗೆ ಮನವಿ ಮಾಡುತ್ತೇನೆ’ ಎಂದರು.

‘ದೆಹಲಿಗೆ ಹೋಗಿ ಬಂದ ನಂತರ ನೀವು ಮುಖ್ಯಮಂತ್ರಿ ಕುರ್ಚಿ ಬಗ್ಗೆ ಯಾವುದೇ ಮಾತು ಆಡುತ್ತಿಲ್ಲ’ ಎಂದಾಗ, ‘ಇದಕ್ಕೆ ಸಮಯವೇ ಉತ್ತರ ನೀಡಲಿದೆ. ಕಾಲ ನಿರ್ಣಯ ಮಾಡುತ್ತದೆ’ ಎಂದರು.

‘ಪಕ್ಷಕ್ಕೆ ಹೊಸ ರಕ್ತ ಆಲೋಚನೆ ಬೇಕು’

‘ಪಕ್ಷಕ್ಕೆ ಹೊಸ ರಕ್ತ ಬರಬೇಕು. ಹೊಸ ಆಲೋಚನೆ ಬರಬೇಕು’ ಎಂದು ಶಿವಕುಮಾರ್ ಹೇಳಿದರು. ‘ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಪರಮೇಶ್ವರ ಅವರ ದಾಖಲೆ ಮುರಿಯುತ್ತೀರಾ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ನನಗೆ ಆರು ವರ್ಷ ಸಾಕು. ನಾನು ಪರಮೇಶ್ವರ ಎಚ್.ಕೆ. ಪಾಟೀಲ ರಾಮಲಿಂಗಾರೆಡ್ಡಿ ಎಲ್ಲರೂ ಹಿರಿಯ ನಾಗರಿಕರಾಗಿದ್ದೇವೆ. ಹೊಸಬರು ಬರಲಿ’ ಎಂದರು.

‘ನೀವು ಅಧ್ಯಕ್ಷ ಸ್ಥಾನ ಬಿಟ್ಟರೆ ಬೇರೆ ಯಾವ ಸ್ಥಾನ ಇದೆ’ ಎಂದು ಕೇಳಿದಾಗ ‘ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ’ ಎಂದರು. ‘ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷವಾಗುತ್ತಿರುವ ಕಾರಣ ಮಾ.10ರಂದು ಭೋಜನ ಕೂಟ ಇಟ್ಟುಕೊಂಡಿದ್ದೇನೆ’ ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.