ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಜೂನ್ 3ರಂದು ಸಂಜೆ 4.10ಕ್ಕೆ ಅವರು ಪದಗ್ರಹಣ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ. ಶನಿವಾರ ಪತ್ರಕರ್ತರ ಜೊತೆ ಮಾತನಾಡಿರುವ ಡಿಕೆಶಿ ಸಹ ಈ ವಿಷಯವನ್ನು ಖಚಿತಪಡಿಸಿದ್ದಾರೆ.

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದಾಗಿನಿಂದ ಪ್ರಮಾಣ ವಚನ ಸ್ವೀಕಾರ ದಿನಾಂಕದ ಬಗ್ಗೆ ಇದ್ದ ವದಂತಿಗೆ ತೆರೆಬಿದ್ದಿದೆ.

ಎರಡು ಕಾರಣಗಳಿಂದ ಡಿ.ಕೆ. ಶಿವಕುಮಾರ್ ಅವರು ಜೂನ್ 3ರಂದೇ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಅಂದು ಸಂಜೆ 4.10ಕ್ಕೆ ಶುಭ ಮುಹೂರ್ತವಿರುವುದರಿಂದ ಅದೇ ಘಳಿಗೆಯಲ್ಲಿ ಪ್ರಮಾಣ ವಚನಕ್ಕೆ ಜ್ಯೋತಿಷಿ ದ್ವಾರಕಾನಾಥ್ ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ ಆ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಲಭ್ಯವಿರಲಿದ್ದು, ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇರಲಿದ್ದು, ಒಬ್ಬರು ದಲಿತ ಸಮುದಾಯದಿಂದ ಮತ್ತು ಮತ್ತೊಬ್ಬರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ತಿಳಿಸಿದೆ.

ಕಾಂಗ್ರೆಸ್ ಪಕ್ಷವು ಹೊಸ ಸರ್ಕಾರದಲ್ಲಿ ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಹಾಗೂ ಪಕ್ಷದ ಬಣಗಳ ನಡುವೆ ಸಮತೋಲನ ಸಾಧಿಸುವ ಸಾಧ್ಯತೆಯಿದೆ. ಹೊಸ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಮುಖ ಖಾತೆ ದೊರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಹಲವು ತಿಂಗಳುಗಳ ಅಧಿಕಾರ ಹಸ್ತಾಂತರ ಗೊಂದಲಕ್ಕೆ ಕಳೆದ ವಾರ ತೆರೆಬಿದ್ದಿತ್ತು. ಕಾಂಗ್ರೆಸ್ ನಾಯಕತ್ವವು ಅಂತಿಮವಾಗಿ ಶಿವಕುಮಾರ್ ಪರವಾಗಿ ನಿಂತು ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು.

ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ರೂಪರೇಷೆಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ. ಹೊಸ ಸಂಪುಟದಲ್ಲಿ ದಲಿತರು, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ಗಾಂಧಿ ಬಯಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.