ತಿರುಪತಿ, ಆಂಧ್ರಪ್ರದೇಶ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಟೆಂಪಲ್ ರನ್ ಆರಂಭಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ತಿರುಮಲ ತಿರುಪತಿ ದೇವಸ್ಥಾನದಲ್ಲಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ.

‘ಇಂದು ಪವಿತ್ರ ತಿರುಮಲ ತಿರುಪತಿ ಕ್ಷೇತ್ರಕ್ಕೆ ಭೇಟಿ ನೀಡಿ, ಎಲ್ಲರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ವೆಂಕಟೇಶ್ವರ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ’ ಎಂದು ಡಿಕೆಶಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಿಕೆಶಿ ಅವರು ಸಿಎಂ ಗಾದಿಗಾಗಿ ದೇವರ ಮೊರೆ ಹೋಗಿದ್ದಾರೆ ಎಂಬ ಚರ್ಚೆಗಳೂ ನಡೆಯುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.