ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಳೆ ಚನ್ನಪಟ್ಟಣ ಕ್ಷೇತ್ರದಲ್ಲಿ ಡಿಕೆಶಿ ಪ್ರವಾಸ

Published 18 ಜೂನ್ 2024, 16:01 IST
Last Updated 18 ಜೂನ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆಗೆ ಎಚ್‌.ಡಿ. ಕುಮಾರಸ್ವಾಮಿ ಆಯ್ಕೆಯಾದ ಕಾರಣ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಆರು ತಿಂಗಳ ಒಳಗೆ ಉಪ ಚುನಾವಣೆ ನಡೆಯುವುದು ಖಚಿತವಾಗಿದ್ದು, ಕ್ಷೇತ್ರವನ್ನು ಜೆಡಿಎಸ್‌ನಿಂದ ಕಿತ್ತುಕೊಳ್ಳಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮುಂದಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನಲ್ಲಿ ಬುಧವಾರ (ಜೂನ್‌ 19) ಡಿ.ಕೆ. ಶಿವಕುಮಾರ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಚನ್ನಪಟ್ಟಣ ತಲುಪಲಿರುವ ಅವರು, ರಾತ್ರಿ 8.30 ಗಂಟೆಯವರೆಗೆ ಕ್ಷೇತ್ರದಲ್ಲಿದ್ದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸೋಲು ಕಂಡಿರುವ ಸಹೋದರ ಡಿ.ಕೆ. ಸುರೇಶ್‌ ಅವರನ್ನು ಚನ್ನಪಟ್ಟಣದಿಂದ ಕಣಕ್ಕಿಳಿಸುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಬಿಜೆಪಿ– ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಬಹುದು ಎಂಬುವುದನ್ನು ನೋಡಿಕೊಂಡು ಅಭ್ಯರ್ಥಿಯನ್ನು ಅಂತಿಮಗೊಳಿಸಬಹುದು. ಏನೇ ಆದರೂ ಶತಾಯ ಗತಾಯ ಕ್ಷೇತ್ರವನ್ನು ಗೆಲ್ಲಲೇ ಬೇಕೆಂಬ ಬಗ್ಗೆಯೂ ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ನಡೆದಿದೆ ಎಂದು ಗೊತ್ತಾಗಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT