ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಎಂದು ಹೆಮ್ಮೆಯಿಂದ ಘೋಷಿಸುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶನಿವಾರ ಘೋಷಿಸಿದ್ದಾರೆ.

ಸಿಎಲ್ಪಿ ಸಭೆ ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಸಂಕಷ್ಟ ಎದುರಾಗಲಿದೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ, ನಮ್ಮದು ಕುಟುಂಬ ಇದ್ದಂತೆ’ ಎಂದು ಕೆ.ಸಿ. ವೇಣುಗೋಪಾಲ್ ಹೇಳಿದರು.

‘ಎಲ್ಲರೂ ಸಿದ್ದರಾಮಯ್ಯ ಅವರ ನಡೆ ಹೇಗಿರಲಿದೆ ಎಂದು ಕೇಳುತ್ತಿದ್ದರು. ಆದರೆ, ಸಿದ್ದರಾಮಯ್ಯ ಅವರು ನನ್ನ ಹೃದಯದಲ್ಲಿ ಕೇವಲ ಕಾಂಗ್ರೆಸ್ ಪಕ್ಷವಿದೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ಪಾಲಿಸುತ್ತೇನೆ ಎಂದು ಉತ್ತರಿಸಿದ್ದರು. ಸಿದ್ದರಾಮಯ್ಯ ಅವರು ತಮ್ಮ ನಡೆಯ ಮೂಲಕ ಅದನ್ನು ಸಾಬೀತಪಡಿಸಿದರು. ಇದು ಕಾಂಗ್ರೆಸ್ ಒಂದು ಕುಟುಂಬ ಎಂಬುದಕ್ಕೆ ಸಾಕ್ಷಿ’ ಎಂದು ಬಣ್ಣಿಸಿದರು.

‘ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಎಂಟು ವರ್ಷಗಳ ಸೇವೆಯನ್ನು ಸಿಎಲ್ಪಿ ಸಭೆಯಲ್ಲಿ ಶ್ಲಾಘಿಸಲಾಗಿದೆ. ಆ ನಿರ್ಣಯವನ್ನು ಸ್ವತಃ ಡಿ.ಕೆ. ಶಿವಕುಮಾರ್ ಮಂಡಿಸಿದರು. ಇದು ಕಾಂಗ್ರೆಸ್ ಪಕ್ಷಕ್ಕೆ ಹೆಮ್ಮೆಯ ಕ್ಷಣ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಂತೆ ಈ ಅಧಿಕಾರ ಹಸ್ತಾಂತರ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಬೆಂಬಲದೊಂದಿಗೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ 2028ರಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ಭವಿಷ್ಯ ನುಡಿದರು.

ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.