ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನೂತನ ನಾಯಕರಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸರ್ವಾನುಮತದಿಂದ ಶನಿವಾರ ಆಯ್ಕೆಯಾಗಿದ್ದು, ಜೂನ್ 3ರಂದು ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದರಾಮಯ್ಯ ಅವರಿಂದ ತೆರವಾದ ಸ್ಥಾನಕ್ಕೆ ಹೊಸ ನಾಯಕನ ಆಯ್ಕೆ ಸುಗಮವಾಗಿ ನಡೆದಿದೆ. ಇದರಿಂದಾಗಿ, ರಾಜ್ಯ ರಾಜಕಾರಣದ ಪಡಸಾಲೆಯಲ್ಲಿ ಕೆಲವು ದಿನಗಳಿಂದ ನಡೆಯುತ್ತಿದ್ದ ‘ಅಧಿಕಾರ ಹಸ್ತಾಂತರ’ ಕುರಿತ ಊಹಾಪೋಹಗಳಿಗೂ ತೆರೆಬಿದ್ದಿದೆ.

ಆ ಬೆನ್ನಲ್ಲೆ, ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಸಿದ್ದರಾಮಯ್ಯನವರ ಜತೆಯಲ್ಲೇ ಭೇಟಿ ಮಾಡಿದ ಶಿವಕುಮಾರ್, ಹೊಸ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ಜೂನ್ 3ರ ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. ಅವರ ಜೊತೆಗೆ 10 ರಿಂದ 12 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಲ್ಪಿ ಸಭೆ ನಡೆಯಿತು. ‘ನೂತನ ನಾಯಕನ ಆಯ್ಕೆ ಪ್ರಕ್ರಿಯೆಗೆ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಕಟಿಸಿದರು. ಅದರಂತೆ, ಸಿದ್ದರಾಮಯ್ಯ ಅವರು ಸಿಎಲ್ಪಿ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಹೆಸರಿಸುವ ಒಂದು ಸಾಲಿನ ನಿರ್ಣಯ ಮಂಡಿಸಿದರು. ಜಿ. ಪರಮೇಶ್ವರ ಅನುಮೋದಿಸಿದರು. ನಂತರ ‘10 ನಿಮಿಷಗಳ ವಿರಾಮ ನೀಡಲಾಗಿದೆ’ ಎಂದು ಸುರ್ಜೇವಾಲಾ ಹೇಳಿದರು. ಸಿದ್ದರಾಮಯ್ಯ, ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಮುಖ್ಯಮಂತ್ರಿಯ ಕೊಠಡಿಗೆ ತೆರಳಿದರು. ಅವರು ಸಭಾಂಗಣಕ್ಕೆ ಮರಳಿದ ನಂತರ ಸಿಎಲ್ಪಿ ನಾಯಕನ ಆಯ್ಕೆ ಪ್ರಕ್ರಿಯೆ ಮತ್ತೆ ಆರಂಭವಾಯಿತು. ಹೊಸ ನಾಯಕರಾಗಿ ಡಿ.ಕೆ. ಶಿವಕುಮಾರ್ ಆಯ್ಕೆ ನಿರ್ಣಯವನ್ನು ಎಲ್ಲ ಶಾಸಕರು ಕೈ ಎತ್ತುವ ಮೂಲಕ ಒಕ್ಕೊರಲಿನಿಂದ ಬೆಂಬಲಿಸಿದರು.

ಶಿವಕುಮಾರ್ ಆಯ್ಕೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಘೋಷಿಸಿದರು. ಬಳಿಕ, ಶಿವಕುಮಾರ್ ಅವರು ನಿರ್ಗಮಿತ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಅವರ ಸೇವೆಯನ್ನು ಕೊಂಡಾಡುವ ನಿರ್ಣಯ ಮಂಡಿಸಿ, ಸಭೆಯ ಬೆಂಬಲ ಕೋರಿದರು. ಅದನ್ನೂ ಸಭೆ ಒಕ್ಕೊರಲಿನಿಂದ ಬೆಂಬಲಿಸಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ‘ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯಕ್ಕೆ ಇದು ಭಾವುಕ ದಿನ. ಸಿದ್ದರಾಮಯ್ಯ ಅವರು ನಮಗೆಲ್ಲರಿಗಾಗಿ ನಿಂತು ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರೇ, ನಾವು ನಿಮಗೆ ವಿಶ್ರಾಂತಿ ನೀಡುವುದಿಲ್ಲ. ಕರ್ನಾಟಕದ ಜೊತೆಗೆ ರಾಷ್ಟ್ರೀಯ ಮಟ್ಟದಲ್ಲೂ ನಿಮ್ಮ ಸೇವೆಯ ಅಗತ್ಯವಿದೆ’ ಎಂದರು. ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಯನ್ನು ಸಿದ್ದರಾಮಯ್ಯನವರು ಸುಗಮಗೊಳಿಸಿದ್ದಾರೆ. ಬಿಜೆಪಿಯು ಈ ಪ್ರಕ್ರಿಯೆ ಸುಲಭವಲ್ಲ ಎಂದು ಭಾವಿಸಿತ್ತು. ಆದರೆ, ಕಾಂಗ್ರೆಸ್ನ ಒಗ್ಗಟ್ಟಿನಿಂದ ಬಿಜೆಪಿಯ ನಿರೀಕ್ಷೆಗೆ ತಣ್ಣೀರು ಎರಚಲಾಯಿತು’ ಎಂದು ಹೇಳಿದರು. ಸಭೆಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೂಡಾ ಇದ್ದರು.

ಬಳಿಕ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿತು. ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪತ್ರವನ್ನು ಶಿವಕುಮಾರ್ ಅವರು ರಾಜ್ಯಪಾಲರಿಗೆ ಹಸ್ತಾಂತರಿಸಲಾಯಿತು. ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, ‘ತಾವು ಲೋಕಭವನದ ಆವರಣದಲ್ಲಿ ಜೂನ್ 3ರಂದು ಸಂಜೆ 4.05 ಗಂಟೆಗೆ ತಮ್ಮ ತಂಡದೊಂದಿಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಬೇಕು’ ಎಂದು ಲೋಕಭವನದಿಂದ ಪತ್ರ ಕಳುಹಿಸಲಾಗಿದೆ.

‘ಪ್ರಮಾಣ ಸ್ವೀಕಾರಕ್ಕೆ ಪಾಸ್ ಲಭ್ಯ ಇಲ್ಲ’

‘ಲೋಕಭವನದ ಗಾಜಿನಮನೆಯಲ್ಲಿ ಸರಳವಾಗಿ ನಡೆಯುವ ಈ ಕಾರ್ಯಕ್ರಮಕ್ಕೆ ಶಾಸಕರು, ಆಹ್ವಾನಿತರು ಹೊರತಾಗಿ ಯಾರಿಗೂ ಪಾಸ್ ನೀಡುವುದಿಲ್ಲ. ಹೊರಜಿಲ್ಲೆಗಳಿಂದ ಯಾರೂ ಬರಬಾರದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಹೇಳಿದರು.

ಪಕ್ಷದ ಕಚೇರಿಯಲ್ಲಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ ಬಾಬು ಜತೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ನೂತನ ಮುಖ್ಯಮಂತ್ರಿ ಯವರ ಪ್ರಮಾಣ ವಚನದ ಬಗ್ಗೆ ಮಾಧ್ಯಮಗಳಲ್ಲಿ ವಿಭಿನ್ನ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಪ್ರಮಾಣ ವಚನ ಕಾರ್ಯಕ್ರಮ ವಿಧಾನಸೌಧದ ಆವರಣದಲ್ಲಿ ನಡೆಯುವುದಿಲ್ಲ’ ಎಂದರು.

‘ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುತ್ತಿಲ್ಲ. ಅಲ್ಲದೇ, ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಆಡಂಬರದ ಕಾರ್ಯಕ್ರಮ ಬೇಡ ಎಂದು ತೀರ್ಮಾನಿಸಲಾಗಿದೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷರು (ಶಿವಕುಮಾರ್) ಸಮ್ಮತಿ ಸೂಚಿಸಿದ್ದಾರೆ. ಇದಕ್ಕೆ ಅಭಿಮಾನಿ ಗಳು ಮತ್ತು ಪಕ್ಷದ ಬೆಂಬಲಿಗರು ಸಹಕರಿಸಬೇಕು’ ಎಂದು ಅವರು ಮನವಿ ಮಾಡಿದರು.

‘ನಮ್ಮದು ಕುಟುಂಬ ಇದ್ದಂತೆ’

‘ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಹಸ್ತಾಂತರದ ಸಂದರ್ಭದಲ್ಲಿ ಸಂಕಷ್ಟ ಎದುರಾಗಲಿದೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ, ನಮ್ಮದು ಕುಟುಂಬ ಇದ್ದಂತೆ’ ಎಂದು ಕೆ.ಸಿ. ವೇಣುಗೋಪಾಲ್ ಹೇಳಿದರು.

ಸಿಎಲ್ಪಿ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಎಲ್ಲರೂ ಸಿದ್ದರಾಮಯ್ಯ ಅವರ ನಡೆ ಹೇಗಿರಲಿದೆ ಎಂದು ಕೇಳುತ್ತಿದ್ದರು. ಆದರೆ, ಸಿದ್ದರಾಮಯ್ಯ ಅವರು ನನ್ನ ಹೃದಯದಲ್ಲಿ ಕೇವಲ ಕಾಂಗ್ರೆಸ್ ಪಕ್ಷವಿದೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ಪಾಲಿಸುತ್ತೇನೆ ಎಂದು ಉತ್ತರಿಸಿದ್ದರು. ಸಿದ್ದರಾಮಯ್ಯ ಅವರು ತಮ್ಮ ನಡೆಯ ಮೂಲಕ ಅದನ್ನು ಸಾಬೀತಪಡಿಸಿದರು. ಇದು ಕಾಂಗ್ರೆಸ್ ಒಂದು ಕುಟುಂಬ ಎಂಬುದಕ್ಕೆ ಸಾಕ್ಷಿ’ ಎಂದು ಬಣ್ಣಿಸಿದರು.

‘ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಎಂಟು ವರ್ಷಗಳ ಸೇವೆಯನ್ನು ಸಿಎಲ್ಪಿ ಸಭೆಯಲ್ಲಿ ಶ್ಲಾಘಿಸಲಾಗಿದೆ. ಆ ನಿರ್ಣಯವನ್ನು ಸ್ವತಃ ಡಿ.ಕೆ. ಶಿವಕುಮಾರ್ ಮಂಡಿಸಿದರು. ಇದು ಕಾಂಗ್ರೆಸ್ ಪಕ್ಷಕ್ಕೆ ಹೆಮ್ಮೆಯ ಕ್ಷಣ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಂತೆ ಈ ಅಧಿಕಾರ ಹಸ್ತಾಂತರ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಬೆಂಬಲದೊಂದಿಗೆ ಶಿವಕುಮಾರ್ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ 2028ರಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ಭವಿಷ್ಯ ನುಡಿದರು.

ಪ್ರಮಾಣವಚನ

ದಿನಾಂಕ: ಜೂನ್ 3

ಸಮಯ: ಸಂಜೆ 4.05

ಸ್ಥಳ: ಗಾಜಿನಮನೆ, ಲೋಕಭವನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.