ಬೆಂಗಳೂರು: ‘ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ಸೌದಿ, ದುಬೈ ಮುಂತಾದ ಕಡೆ ಸಿಲುಕಿರುವ ಭಾರತೀಯ ನಾಗರಿಕರನ್ನು ಕೇಂದ್ರ ಸರ್ಕಾರ ರಕ್ಷಣೆ ಮಾಡಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಯುದ್ದಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರು, ಕನ್ನಡಿಗರಿಗೆ ಧೈರ್ಯ ತುಂಬುವ ಕೆಲಸ ನಾವು ಮಾಡುತ್ತೇವೆ. ನಾಗರಿಕರ ರಕ್ಷಣೆಗೆ ಯಾವ ರೀತಿಯಲ್ಲಿ ಒತ್ತಡ ಹೇರಬೇಕೊ, ಆ ಕೆಲಸವನ್ನೂ ಮಾಡುತ್ತೇವೆ. ಅಲ್ಲಿರುವ ಕನ್ನಡ ಸಂಘಟನೆಗಳು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು’ ಎಂದರು

‘ಪಕ್ಷದ ಶಾಸಕರಾದ ಎ.ಸಿ. ಶ್ರೀನಿವಾಸ್, ಭರತ್ ರೆಡ್ಡಿ ಅವರ ಕುಟುಂಬ, ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬೋಜೇಗೌಡ ಸೇರಿದಂತೆ ಅನೇಕರು ದುಬೈನಲ್ಲಿ ಸಿಲುಕಿಕೊಂಡಿದ್ದಾರೆ. ಅನೇಕ ಪರಿಚಿತರಿಂದ ವ್ಯಾಪಕವಾಗಿ ಕರೆಗಳು ಬರುತ್ತಿವೆ. ನಮ್ಮ ಜೊತೆ ವ್ಯವಹಾರ ನಡೆಸುವವರು, ಪರಿಚಿತರು ಗಾಬರಿಯಾಗಿದ್ದಾರೆ. ಆತಂಕ ಪಡುವುದು ಬೇಡವೆಂದು ಹೇಳಿದ್ದೇನೆ’ ಎಂದರು.

‘ಅಮೆರಿಕ ಯುದ್ಧವನ್ನು ನಿಲ್ಲಿಸಬೇಕಿದೆ. ಈ ಯುದ್ಧದಿಂದ ಭಾರತಕ್ಕೂ ಗಂಡಾಂತರವಾಗಲಿದೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.