ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ ನದಿ ಬ್ಯಾರೇಜ್‌ಗಳಿಗೆ ಡಿಕೆಶಿ ಭೇಟಿ

Last Updated 22 ಜೂನ್ 2019, 14:14 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದ ಗಡಿಗೆ ಹೊಂದಿಕೊಂಡಿರುವ, ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಶಿರೋಳ ತಾಲ್ಲೂಕು ವ್ಯಾಪ್ತಿಯಲ್ಲಿ ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ರಾಜಾಪುರ ಬ್ಯಾರೇಜ್‌ಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಶನಿವಾರ ಭೇಟಿ ನೀಡಿ, ಪರಿಶೀಲಿಸಿದರು.

‘ಬೇಸಿಗೆಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ನೀರಿನ ಅಭಾವ ತೀವ್ರವಾಗಿ ಕಾಡುತ್ತದೆ. ಇದಕ್ಕೆ ಪರಿಹಾರವಾಗಿ, ಕೊಯ್ನಾ ಜಲಾಶಯದಿಂದ ನೀರು ಪಡೆಯುವ ಸಂಬಂಧ ಮಹಾರಾಷ್ಟ್ರ ಸರ್ಕಾರದ ಜೊತೆ ಒಪ್ಪಂದ ಮಾಡಿಕೊಳ್ಳಬೇಕಾಗಿದೆ. ಅದಕ್ಕಾಗಿ ಇಲ್ಲಿನ ವಾಸ್ತವ ಸ್ಥಿತಿ ಅರಿಯಲು ಭೇಟಿ ನೀಡಿದ್ದೇನೆ’ ಎಂದು ಶಿವಕುಮಾರ್‌ ಸುದ್ದಿಗಾರರಿಗೆ ತಿಳಿಸಿದರು.

‘ಇಷ್ಟು ವರ್ಷಗಳ ಕಾಲ ಕೊಯ್ನಾದಿಂದ ಪಡೆದ ನೀರಿಗೆ ರಾಜ್ಯ ಸರ್ಕಾರವು ಹಣ ಪಾವತಿಸುತ್ತಿತ್ತು. ಆದರೆ, ಈ ಸಲ ಮಹಾರಾಷ್ಟ್ರ ಸರ್ಕಾರವು ತನಗೆ ಹಣ ಬೇಡ, ಗಡಿಗೆ ಹೊಂದಿಕೊಂಡಿರುವ ಸಾಂಗ್ಲಿ ಜಿಲ್ಲೆಯ ಸೊಲ್ಲಾಪುರ ಸುತ್ತಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸಬೇಕು. ನೀರಿಗೆ ಬದಲಾಗಿ ನೀರು ನೀಡಬೇಕು ಎನ್ನುವ ಷರತ್ತು ವಿಧಿಸಿದೆ’ ಎಂದು ಅವರು ವಿವರಿಸಿದರು.

‘ಈ ಷರತ್ತಿನ ಬಗ್ಗೆ ಅಧಿಕಾರಿಗಳ ಮಟ್ಟದಲ್ಲಿ ಪರಿಶೀಲನೆ ನಡೆದಿದೆ. ಎರಡೂ ರಾಜ್ಯಗಳ ನಡುವೆ ನೀರು ವಿನಿಮಯ ಒಪ್ಪಂದ ಮಾಡಿಕೊಳ್ಳಲು ರಾಜ್ಯ ಸರ್ಕಾರದ ಸಹಮತವಿದೆ. ಆದರೆ, ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಬಳಿಕವೇ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

ಒಂದೇ ವಾಹನದಲ್ಲಿ ಪ್ರಯಾಣ:

ರಾಜಾಪುರದಿಂದ ಅಥಣಿಯ ಉಗಾರಗೆ ತೆರಳುವ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್‌ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರಯಾಣಿಸಿದರು. ಕಲ್ಲೋಳ, ಮಾಂಜರಿ ಹಾಗೂ ಹಿಪ್ಪರಗಿ ಬ್ಯಾರೇಜ್‌ಗಳಿಗೂ ಭೇಟಿ ನೀಡಿ, ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT