ಬೆಂಗಳೂರು: ‘ಕರ್ನಾಟಕದ ಆರ್ಥಿಕ ಬೆಳವಣಿಗೆಯನ್ನು ಕುಗ್ಗಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಹಿಂಬಾಗಿಲಿನ ಮೂಲಕ ಮಾಡುತ್ತಿದೆ’ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಆರೋಪಿಸಿದರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಬಜೆಟ್ನಲ್ಲಿ ಗುಜರಾತ್, ಉತ್ತರಪ್ರದೇಶ ಸೇರಿ ಉತ್ತರಭಾರತದ ರಾಜ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ದಕ್ಷಿಣ ಭಾರತದ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ’ ಎಂದು ದೂರಿದರು.

‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ’ ಎಂದೂ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಕೇಂದ್ರ ಸರ್ಕಾರದ ತಾರತಮ್ಯವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ವಿಭಜನೆಯ ಅಭಿಪ್ರಾಯಗಳು ಮಡುಗಟ್ಟಿವೆ. ತಮಿಳುನಾಡಿನಲ್ಲಿ ಹಲವು ಬಾರಿ ಈ ಕುರಿತು ಚರ್ಚೆಗಳು ಆಗಿವೆ’ ಎಂದರು.

‘ಕೇಂದ್ರದಿಂದ ರಾಜ್ಯಕ್ಕೆ ದೊರೆಯಬೇಕಾದ ಆರ್ಥಿಕ ನೆರವು ಯಾರ ಭಿಕ್ಷೆಯೂ ಅಲ್ಲ. ದಕ್ಷಿಣ ಭಾರತವನ್ನು ಮತ ಗಳಿಕೆಗಷ್ಟೇ ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. ಉಳಿದಂತೆ ಯಾವುದೇ ನೆರವು ನೀಡುತ್ತಿಲ್ಲ’ ಎಂದೂ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.