ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಒಂದು ದೇಶ, ಒಂದು ಚುನಾವಣೆ’ | ಪ್ರಾದೇಶಿಕ ಪಕ್ಷ ಮುಗಿಸುವ ಹುನ್ನಾರ: ಡಿಕೆಶಿ

‘ಒಂದು ದೇಶ, ಒಂದು ಚುನಾವಣೆ’ಗೆ ಕೇಂದ್ರ ಸಂಪುಟ ಒಪ್ಪಿಗೆ
Published : 18 ಸೆಪ್ಟೆಂಬರ್ 2024, 16:16 IST
Last Updated : 18 ಸೆಪ್ಟೆಂಬರ್ 2024, 16:16 IST
ಫಾಲೋ ಮಾಡಿ
Comments

ಬೆಂಗಳೂರು: ‘ಯಾವುದೇ ಪಕ್ಷ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಿದರೂ, ಬಿಜೆಪಿ ‘ಆಪರೇಷನ್‌ ಕಮಲ’ದ ಮೂಲಕ ಸರ್ಕಾರ ಬೀಳಿಸುತ್ತಿತ್ತು. ಆದರೆ ಈಗ ‘ಒಂದು ದೇಶ, ಒಂದು ಚುನಾವಣೆ’ ಹೆಸರಿನಲ್ಲಿ ಅನೇಕ ರಾಜ್ಯ ಸರ್ಕಾರಗಳನ್ನು ಬೀಳಿಸಲು ಮುಂದಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕುಮಾರಕೃಪ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅವಧಿಗೂ ಮುನ್ನ ಸರ್ಕಾರ ಪತನವಾದರೆ ಅಥವಾ ವಿಧಾನಸಭೆ ವಿಸರ್ಜನೆಯಾದರೆ ತಕ್ಷಣಕ್ಕೆ ಚುನಾವಣೆಗೆ ಹೋಗಲು ಅವಕಾಶವಿರುವುದಿಲ್ಲ. ಲೋಕಸಭೆ ಚುನಾವಣೆವರೆಗೆ ರಾಜ್ಯಪಾಲರ ಆಡಳಿತ ಇರಬೇಕಾಗುತ್ತದೆ. ಇದು ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಎಂದು ಆರೋಪಿಸಿದರು.

‘ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಸ್ವಾತಂತ್ರ್ಯ ಭಾರತದ ಆರಂಭದಲ್ಲಿ ಏಕ ಚುನಾವಣೆ ವ್ಯವಸ್ಥೆ ಇತ್ತು. ಆದರೆ ಕೆಲವು ರಾಜ್ಯ ಸರ್ಕಾರಗಳು ಅವಧಿಗೂ ಮುನ್ನವೇ ಚುನಾವಣೆಗೆ ಹೋದವು. ಕೆಲವು ಸರ್ಕಾರಗಳು ಪತನವಾದವು. ಏಕ ಚುನಾವಣೆ ವ್ಯವಸ್ಥೆ ಸಂಪೂರ್ಣವಾಗಿ ಹೋಯಿತು. ಹೀಗಿರುವಾಗ ಒಂದೇ ಚುನಾವಣೆ ನಡೆಸಲು ಹೇಗೆ ಸಾಧ್ಯ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಇಂತಹ ಬದಲಾವಣೆ ತರಲು ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಅಗತ್ಯ. ಬಿಜೆಪಿಗೆ ಸಂಸತ್ತಿನಲ್ಲಿ ಅಂತಹ ಬಲ ಇಲ್ಲ. ಹೀಗಿರುವಾಗ ಸರ್ವಪಕ್ಷಗಳ ಸಭೆ ಕರೆದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಕ್ರಮ ತೆಗೆದುಕೊಳ್ಳಬೇಕಿತ್ತು. ಸುಮ್ಮನೆ ಸಂಪುಟ ಸಭೆಯಲ್ಲಿ ಪ್ರಸ್ತಾವಕ್ಕೆ ಒಪ್ಪಿಗೆ ನೀಡುವುದರಿಂದ ಏನೂ ಆಗುವುದಿಲ್ಲ. ಇದರ ಬದಲಿಗೆ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಕೆಲಸವನ್ನಾದರೂ ಮಾಡಲಿ’ ಎಂದರು.

ಆರ್.ಅಶೋಕ
ಆರ್.ಅಶೋಕ
ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ
ಒಂದೇ ಚುನಾವಣೆ ನಡೆಸುವದರಿಂದ ಸರ್ಕಾರದ ಹಣಕಾಸಿನ ಹೊರೆ ಇಳಿಕೆಯಾಗಲಿದೆ. ಅಲ್ಲದೇ ಚುನಾಯಿತ ಪ್ರತಿನಿಧಿಗಳು ಆಡಳಿತದತ್ತ ಗಮನಹರಿಸಬಹುದು
ಆರ್‌.ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ
ಲೋಕಸಭಾ ಚುನಾವಣೆಗೆ ಬಿಜೆಪಿ ನೀಡಿದ್ದ ಭರವಸೆಗಳಲ್ಲಿ ‘ಒಂದು ದೇಶ ಒಂದು ಚುನಾವಣೆ’ಯೂ ಇತ್ತು. ಈಗ ಅದನ್ನು ಜಾರಿಗೆ ತರಲು ಕ್ರಮ ತೆಗೆದುಕೊಳ್ಳಲಾಗಿದೆ
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT