ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳನ್ನೂ ತಮ್ಮ ಜೊತೆ ಕರೆದೊಯ್ದಿರುವ ಶಿವಕುಮಾರ್, ‘ಮುನಿಸಿಪಾಲಿಟಿ ಆಡಳಿತ ಮತ್ತು ಘನ ತ್ಯಾಜ್ಯ ನಿರ್ವಹಣೆ’ ಸಂಬಂಧಿಸಿದಂತೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಜೊತೆ ಚರ್ಚೆ ನಡೆಸಲಿದ್ದಾರೆ.

ಆರ್ಸಿಬಿ ವಿಜಯೋತ್ಸವ ವೇಳೆಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ನಂತರ ಅವರು ದೆಹಲಿಗೆ ತೆರಳುತ್ತಿರುವುದರಿಂದ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವ ಸಾಧ್ಯತೆಯೂ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.