ಬೆಂಗಳೂರು: ‘ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಅಂದಾಜು ₹82 ಕೋಟಿ ನಷ್ಟವಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.

ಈ ಸಂಬಂಧ ಕನಕಪುರ ತಾಲ್ಲೂಕಿನ ರವಿಕುಮಾರ್ ಕೆಂಚನಹಳ್ಳಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘2019ರ ಸೆಪ್ಟೆಂಬರ್ 4ರಿಂದ 11ರವರೆಗೆ ಜಿಲ್ಲೆಯ ವಿವಿಧೆಡೆ ನಡೆದ ಪ್ರತಿಭಟನೆಗಳಲ್ಲಿ ₹ 82 ಕೋಟಿ ನಷ್ಟವಾಗಿದೆ. 40 ಜನರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ’ ಎಂದರು.

ವಿಚಾರಣೆಯನ್ನು ಫೆಬ್ರುವರಿ 3ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.