ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿತ್ಯವೂ ಪಕ್ಷದ ಶಾಸಕರ, ಕಾರ್ಯಕರ್ತರ ಭೇಟಿ– ಡಿಕೆಶಿ

Published : 9 ನವೆಂಬರ್ 2023, 15:29 IST
Last Updated : 9 ನವೆಂಬರ್ 2023, 15:29 IST
ಫಾಲೋ ಮಾಡಿ
Comments

ಬೆಂಗಳೂರು: ‘ಹೊರಗಡೆ ಹೋಗುವ ದಿನಗಳ ಹೊರತಾಗಿ ಇತರ ಎಲ್ಲ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ 10.30ರವರೆಗೆ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರ ಭೇಟಿಗೆ ಸಮಯಾವಕಾಶ ನೀಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸ ಬಳಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ಸಮಸ್ಯೆಗಳನ್ನು ಹೇಳಿಕೊಳ್ಳಲು ಈ ಅವಧಿಯಲ್ಲಿ ಅವಕಾಶ ನೀಡಲಾಗುವುದು’ ಎಂದರು.

‘ಪಕ್ಷದಲ್ಲಿ ಮೂರು ವರ್ಷಗಳಿಗಿಂತ ಹೆಚ್ಚು ಅವಧಿಯಿಂದ ಪದಾಧಿಕಾರಿಗಳಾಗಿ ಇರುವವರನ್ನು ಬದಲಿಸಿ ಬೇರೆಯವರಿಗೆ ಅವಕಾಶ ನೀಡುವ ಚಿಂತನೆಯಿದೆ’ ಎಂದರು.

‘ಲೋಕಸಭೆ ಚುನಾವಣೆಗೆ ಪಕ್ಷದಿಂದ ಸಂಭವನೀಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಶೇ 75ರಷ್ಟು ಸಚಿವರು ತಮ್ಮ ಜಿಲ್ಲೆಗಳಿಗೆ ತೆರಳಿ ಸಭೆ ಮಾಡಿದ್ದಾರೆ. ಉಳಿದವರೂ ಆದಷ್ಟು ಸಭೆ ಮಾಡಿ ವರದಿ ನೀಡಲಿದ್ದಾರೆ’ ಎಂದರು.

ಸಚಿವರಾದ ಶಿವಾನಂದ ಪಾಟೀಲ, ಸಂತೋಷ್ ಲಾಡ್, ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಕಾರ್ಯದರ್ಶಿ ತುಕಾರಾಮ್, ಶಾಸಕರಾದ ಜಿ. ಎಸ್. ಪಾಟೀಲ, ತರೀಕೆರೆ ಶ್ರೀನಿವಾಸ್, ಶಾಂತನಗೌಡ, ದರ್ಶನ್ ಧ್ರುವನಾರಾಯಣ್, ರವಿಶಂಕರ್, ಡಾ. ಎಚ್‌.ಡಿ. ರಂಗನಾಥ್, ವಿಧಾನ ಪರಿಷತ್‌ ಸದಸ್ಯ ಸುನಿಲ್‌ಗೌಡ ಪಾಟೀಲ, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ್, ಶಿವರಾಮ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಅವರು ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT