ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರಿಂದ ಖರೀದಿಸುವ ಹಾಲಿನ ದರ ಕಡಿತ ಸಲ್ಲದು: ಸಿದ್ದರಾಮಯ್ಯ

Published 4 ಜೂನ್ 2023, 20:03 IST
Last Updated 4 ಜೂನ್ 2023, 20:03 IST
ಅಕ್ಷರ ಗಾತ್ರ

ಬೆಂಗಳೂರು: ‘ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಕಾರಣ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ದರ ಕಡಿತ ಮಾಡಿದೆ ಎಂದು ವರದಿಯಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್‌) ವ್ಯವಸ್ಥಾಪಕ ನಿರ್ದೇಶಕರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು’ ಎಂದು ಸೂಚಿಸಿದ್ದಾರೆ.

‘ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು’ ಎಂದೂ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ಏಪ್ರಿಲ್‌ 1ರಿಂದ ಮೇ 31ರವರೆಗೆ ಪ್ರತಿ ಲೀಟರ್‌ ಹಾಲಿಗೆ ₹2.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ ₹1.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT