ಸುವರ್ಣ ವಿಧಾನಸೌಧ (ಬೆಳಗಾವಿ): ‘ನನ್ನ ಅನುಮೋದನೆ ಇಲ್ಲದೆ ಯಾವುದೇ ವರ್ಗಾವಣೆ ಆದೇಶಗಳನ್ನು ಹೊರಡಿಸಬಾರದು. ಅಲ್ಲದೆ, ಘಟನೋತ್ತರ ಅನುಮೋದನೆಗೂ ಮಂಡಿಸಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟಪ್ಪಣೆ ಹೊರಡಿಸಿದ್ದಾರೆ.

ಈ ಕುರಿತು ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳಿಗೆ ಸೂಚನೆ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಡಿ. 17ರಂದು ಮುಖ್ಯಮಂತ್ರಿ ಟಿಪ್ಪಣಿ ಹೊರಡಿಸಿದ್ದಾರೆ.

‘ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡುವುದು ಅಗತ್ಯವಾಗಿದ್ದರೆ ಮುಖ್ಯಮಂತ್ರಿಯಿಂದ ಪೂರ್ವಾನುಮೋದನೆ ಪಡೆಯಬೇಕು. ಇಲ್ಲದಿದ್ದರೆ ಸಂಬಂಧಿಸಿದ ಇಲಾಖಾ ಮುಖ್ಯಸ್ಥರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು 2023ರ ಆಗಸ್ಟ್ 31ರಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಅಲ್ಲದೆ, 2024ರ ಜ. 3ರಂದು ಮುಖ್ಯಮಂತ್ರಿ ಕೂಡಾ ಟಿಪ್ಪಣಿ ನೀಡಿದ್ದರು.

ಆದರೂ, ಈ ನಿರ್ದೇಶನಗಳನ್ನು ಉಲ್ಲಂಘಿಸಿ, ವರ್ಗಾವಣೆಗೆ ಸಂಬಂಧಿಸಿದಂತೆ ಘಟನೋತ್ತರ ಅನುಮೋದನೆಗಾಗಿ ಇಲಾಖೆಗಳು ಪದೇ ಪದೇ ಕಡತಗಳನ್ನು ಸಲ್ಲಿಸುತ್ತಿವೆ. ಇನ್ನು ಮುಂದೆ ಇಂತಹ ಯಾವುದೇ ವರ್ಗಾವಣೆ ಕಡತಗಳನ್ನು ಘಟನೋತ್ತರ ಅನುಮೋದನೆ ಕೋರಿ ಮಂಡಿಸಬಾರದು ಎಂದು ತಮ್ಮ ಟಿಪ್ಪಣಿಯಲ್ಲಿ ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.