ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Published 18 ಮಾರ್ಚ್ 2024, 22:56 IST
Last Updated 18 ಮಾರ್ಚ್ 2024, 22:56 IST
ಅಕ್ಷರ ಗಾತ್ರ

ಬೆಂಗಳೂರು: ‘ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರೈತರು ಬಿಜೆಪಿಯನ್ನು ಯಾಕೆ ಬೆಂಬಲಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಿವಮೊಗ್ಗದಲ್ಲಿ ಮೋದಿ ಸೋಮವಾರ ಚುನಾವಣಾ ಪ್ರಚಾರ ಕೈಗೊಂಡ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ‘ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್‌ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ’ ಎಂದು ಕೆಣಕಿದ್ದಾರೆ.

‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆಯನ್ನು 2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಯಡಿಯೂರಪ್ಪ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸಿಲ್ಲ. ಹೀಗೆ ದ್ರೋಹ ಬಗೆದವರನ್ನು ರೈತರು ಯಾಕೆ ಬೆಂಬಲಿಸಬೇಕು’ ಎಂದು ಕೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT