ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಮುಷ್ಕರ: ಹಸುಳೆ ಸಾವು

Last Updated 28 ಜುಲೈ 2018, 20:18 IST
ಅಕ್ಷರ ಗಾತ್ರ

ಬೆಳಗಾವಿ: ವೈದ್ಯರ ಮುಷ್ಕರದಿಂದಾಗಿ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದು ಸಾವನ್ನಪ್ಪಿದೆ.

ಗೋಕಾಕ ಆಸ್ಪತ್ರೆಯಲ್ಲಿ ಜನಿಸಿದ್ದ ಹೆಣ್ಣು ಮಗುವನ್ನು ಉಸಿರಾಟ ತೊಂದರೆ ಚಿಕಿತ್ಸೆಗಾಗಿ ಬೆಳಗಾವಿಯ ಕೋಟೆ ಕೆರೆ ಬಳಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರಿಂದ ಚಿಕಿತ್ಸೆ ಸಿಗದೆ ಮಗು ಮೃತಪಟ್ಟಿದೆ. ಈ ಬಗ್ಗೆ ಯಾರೂ ದೂರು ನೀಡಿಲ್ಲ.

ನೀರಸ: ಭಾರತೀಯ ವೈದ್ಯಕೀಯ ಸಂಘ (ಐಎಂಎ) ಶನಿವಾರ ಕರೆ ನೀಡಿದ್ದ ಮುಷ್ಕರಕ್ಕೆ ದೆಹಲಿ, ಕರ್ನಾಟಕ ಸೇರಿದಂತೆ ಕೆಲವೆಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನ ಖಾಸಗಿ ಆಸ್ಪತ್ರೆಗಳ ಹೊರರೋಗಿಗಳ ವಿಭಾಗಗಳು(ಒಪಿಡಿ) ಎಂದಿನಂತೆ ಕಾರ್ಯನಿರ್ವಹಿಸಿದವು. ಹೀಗಾಗಿ ರೋಗಿಗಳಿಗೆ ಮುಷ್ಕರದ ಬಿಸಿ ತಟ್ಟಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT