ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Pink WhatsApp ಅಪಾಯಕಾರಿ ಎಚ್ಚರಿಕೆಯಿಂದಿರಿ: ಕರ್ನಾಟಕ ಪೊಲೀಸ್‌

Published 24 ಜನವರಿ 2024, 3:08 IST
Last Updated 24 ಜನವರಿ 2024, 3:08 IST
ಅಕ್ಷರ ಗಾತ್ರ

ಬೆಂಗಳೂರು: ಸೈಬರ್‌ ವಂಚನೆಯಿಂದ ದೂರವಿರಲು ಗುಲಾಬಿ ಬಣ್ಣದ ವಾಟ್ಸ್‌ಆ‍್ಯಪ್‌ಅನ್ನು (Pink WhatsApp) ಬಳಸದಿರಿ ಎಂದು ಕರ್ನಾಟಕ ರಾಜ್ಯ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. 

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಪೊಲೀಸ್, ‘ಗುಲಾಬಿ ಬಣ್ಣದ ವಾಟ್ಸ್ ಆಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ, ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್‌ಆ‍್ಯಪ್‌ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ (ದತ್ತಾಂಶ) ಕದಿಯಲು ಇಲ್ಲವೇ, Android ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ..’ ಎಂದು ಸಂದೇಶ ನೀಡಿದೆ.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕವೇ ಹೆಚ್ಚು ಸೈಬರ್‌ ಅಪರಾಧ ಪ್ರಕರಣಗಳು ನಡೆಯುತ್ತಿದ್ದು, ಪ್ರತಿದಿನ ಹಲವರು ವಂಚನೆಗೆ ಒಳಗಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಒಂದು ವೇಳೆ ನೀವು ಗುಲಾಬಿ  ವಾಟ್ಸ್‌ಆ‍್ಯಪ್‌ಅನ್ನು ಮೊಬೈಲ್‌ನಲ್ಲಿ ಇನ್‌ಸ್ಟಾಲ್‌ ಮಾಡಿದರೆ ಫೋನ್‌ನಲ್ಲಿರುವ ಫೋಟೊ, ಸೇವ್‌ ಆಗಿರುವ ಫೋನ್‌ ನಂಬರ್‌ಗಳು, ನೆಟ್‌ ಬ್ಯಾಂಕಿಂಗ್‌ ಪಾಸ್‌ವರ್ಡ್‌, ಎಸ್‌ಎಂಎಸ್‌ ಹ್ಯಾಕ್‌ ಆಗಲಿದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT