ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಸ್‌. ದ್ವಾರಕಾನಾಥ್‌ ಕಾಂಗ್ರೆಸ್‌ ಸೇರ್ಪಡೆ

Last Updated 20 ಆಗಸ್ಟ್ 2021, 16:27 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ವಕೀಲ ಡಾ.ಸಿ.ಎಸ್‌. ದ್ವಾರಕಾನಾಥ್‌ ಅವರು ಶುಕ್ರವಾರ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದರು.

ರೇಸ್‌ ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಭವನದಲ್ಲಿ ನಡೆದ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜನ್ಮದಿನಾಚರಣೆ ಸಮಾರಂಭದಲ್ಲೇ ದ್ವಾರಕಾನಾಥ್‌ ಅವರು ಪಕ್ಷ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌– ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದ್ವಾರಕಾನಾಥ್‌ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧರಿಸಿದ್ದರು.

ಕಾಂಗ್ರೆಸ್‌ ಸೇರಿದ ಬಳಿಕ ಪ್ರತಿಕ್ರಿಯಿಸಿದ ಅವರು, ‘ಯುಪಿಎ ಸರ್ಕಾರದಲ್ಲಿ ಪ್ರಧಾನಿಯಾಗಿದ್ದ ಡಾ. ಮನಮೋಹನ್‌ ಸಿಂಗ್‌ ಅವರು ಅತ್ಯಂತ ದುರ್ಬಲ ಸಮುದಾಯಗಳನ್ನು ಗುರುತಿಸಿ, ಅವಕಾಶಗಳನ್ನು ಕಲ್ಪಿಸಿದ್ದರು. ಧ್ವನಿ ಇಲ್ಲದ ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವಕೆಲಸವನ್ನು ನಾನು ಮಾಡುವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT