ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಜಗುಣ ಸ್ವಾಮೀಜಿಗೆ ಡಾ. ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ

Last Updated 25 ಜೂನ್ 2021, 8:40 IST
ಅಕ್ಷರ ಗಾತ್ರ

ಧಾರವಾಡ: ಲಂಡನ್‌ನ ಬಸವ ಅಂತರ ರಾಷ್ಟ್ರೀಯ ಪ್ರತಿಷ್ಠಾನದ ಸಹಕಾರದಲ್ಲಿ ಬೆಂಗಳೂರು ನಗರ ಶರಣ ಸಾಹಿತ್ಯ ಪರಿಷತ್ ಹಾಗೂ ಜಾನಪದ ಸಂಶೋಧನ ಕೇಂದ್ರದ ಆಶ್ರಯದಲ್ಲಿ ನೀಡುವ ಡಾ. ಎಂ.ಎಂ.ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿಯು ಈ ಬಾರಿ ಮುಂಡರಗಿ ತೋಂಟದಾರ್ಯ ನಿಜಗುಣಪ್ರಭು ಸ್ವಾಮೀಜಿ ಅವರಿಗೆ ಲಭಿಸಿದೆ.

ಈ ವಿಷಯ ಕುರಿತು ಶುಕ್ರವಾರ ಮಾಹಿತಿ ನೀಡಿದ ಪ್ರತಿಷ್ಠಾನದ ಸದಸ್ಯ ಬಿ.ಎಲ್.ಪಾಟೀಲ, ‘ಪ್ರಶಸ್ತಿಯು ₹25ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ.ಜೂನ್ 27ರಂದು ಸಂಜೆ 4ಕ್ಕೆ ನಗರದ ಜಾನಪದ ಸಂಶೋಧನಾ ಕೇಂದ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ’ ಎಂದರು.

‘ವೈಚಾರಿಕ ಚಿಂತಕ ಡಾ. ಎಂ.ಎಂ.ಕಲಬುರ್ಗಿ ಅವರ ಹತ್ಯೆಯಾದ ನಂತರ ಅವರ ಹೆಸರಿನಲ್ಲಿ ಪ್ರಗತಿಪರ ಚಿಂತಕ ಪ್ರಶಸ್ತಿಯನ್ನು ನೀಡಲು ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನವು ಆರಂಭಿಸಿತು.ಮೌಡ್ಯತೆ ಮತ್ತು ಮೂಢನಂಬಿಕೆಗಳ ವಿರುದ್ಧ ನಿರಂತರವಾಗಿ ಕೆಲಸ ಮಾಡುತ್ತಿರುವವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈವರೆಗೂ ಎಂ.ಎಸ್.ಆಶಾದೇವಿ,ಜಿ.ಕೆ. ಗೋವಿಂದರಾವ್ ಹಾಗೂ ಇತರರಿಗೆ ಈ ಪ್ರಶಸ್ತಿ ಲಭಿಸಿದೆ’ ಎಂದರು.

‘ಪ್ರಶಸ್ತಿ ಪ್ರದಾನ ಸಮಾರಂಭದ ನೇತೃತ್ವವನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಗೊ.ರು. ಚನ್ನಬಸಪ್ಪ ವಹಿಸಲಿದ್ದಾರೆ. ಅತಿಥಿಗಳಾಗಿ ವಿಮರ್ಶಕಿ ಪ್ರೊ. ಎಂ.ಎಸ್. ಆಶಾದೇವಿ, ಉಮಾದೇವಿ ಕಲಬುರ್ಗಿ ಪಾಲ್ಗೊಳ್ಳಲಿದ್ದಾರೆ. ಸಾಹಿತಿ ಡಾ. ಬಾಳಣ್ಣ ಶೀಗಿಹಳ್ಳಿ ಪ್ರಶಸ್ತಿ ಪ್ರದಾನ ಮಾಡುವರು. ಲಂಡನ್‌ ಬಸವ ಅಂತರ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಮಹಾದೇವಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಆಶಯ ನುಡಿಗಳನ್ನಾಡುವರು’ ಎಂದು ಹೇಳಿದರು.

‘ಕಾರ್ಯಕ್ರಮವು ಆನ್‌ಲೈನ್‌ ಮೂಲಕ ನಡೆಯಲಿದ್ದು, ಜೂಮ್‌ ಮೀಟಿಂಗ್‌ ಕೋಡ್‌– 87918767720 ಲಿಂಕ್‌ ಮೂಲಕ ನೇರಪ್ರಸಾರವನ್ನು ವೀಕ್ಷಿಸಬಹುದಾಗಿದೆ. ವೀಕ್ಷಣೆಗೆ ಪಾಸ್‌ವರ್ಡ್‌– 2021 ಬಳಕೆ ಮಾಡಬಹುದು’ ಎಂದರು.

ಜಾನಪದ ಸಂಶೋಧನಾ ಕೇಂದ್ರದ ಬಸಲಿಂಗಯ್ಯ ಹಿರೇಮಠ, ವಿಶ್ವೇಶ್ವರಿ ಹಿರೇಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT