ಕಲಬುರ್ಗಿ: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಗರದ ಜಿಮ್ಸ್ ವೈದ್ಯಕೀಯ ಕಾಲೇಜಿಗೆ ಭಾನುವಾರ ಬೆಳಿಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತಾಡಲಿದ್ದಾರೆ’ ಎಂದರು.

ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ ಎಂದ ಅವರು, ವರದಿ ಬರುವ ಮುನ್ನವೇ ಮನೆಗೆ ಕಳುಹಿಸುತ್ತಿರುವ ಕ್ರಮವನ್ನು ಸಮರ್ಥಿಸಿಕೊಂಡರು.

ರೋಗ ಲಕ್ಷಣ ಇಲ್ಲದಿದ್ದರೆ ಅವರಿಂದ ಹರಡುವ ಸಾಧ್ಯತೆ ಕಡಿಮೆ. ಇದನ್ನು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ ಎಂದರು.

ಸದ್ಯಕ್ಕೆ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗಾಣಗಾಪುರದ ದತ್ತ ಮಂದಿರಕ್ಕೆ ಭೇಟಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.