ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪದವೀಧರ, ಶಿಕ್ಷಕರ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಪ್ರಕಟಿಸಿದ ಚುನಾವಣೆ ಆಯೋಗ

Published 23 ನವೆಂಬರ್ 2023, 15:44 IST
Last Updated 23 ನವೆಂಬರ್ 2023, 15:44 IST
ಅಕ್ಷರ ಗಾತ್ರ

ಬೆಂಗಳೂರು: ಮೂರು ಪದವೀಧರ ಕ್ಷೇತ್ರ ಹಾಗೂ ನಾಲ್ಕು ಶಿಕ್ಷಕರ ಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು ರಾಜ್ಯ ಚುನಾವಣೆ ಆಯೋಗ ಗುರುವಾರ ಪ್ರಕಟಿಸಿದೆ.

ಕೇಂದ್ರ ಚುನಾವಣೆ ಆಯೋಗದ ವೇಳಾಪಟ್ಟಿಯಂತೆ ಹೊಸದಾಗಿ (ಡಿ–ನೊವೊ) ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಬೇಕಿದ್ದು, ಡಿ.30ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ರಾಜ್ಯದ ಮುಖ್ಯ ಚುನಾವಣೆ ಅಧಿಕಾರಿ ಮನೋಜ್‌ಕುಮಾರ್‌ ಮೀನಾ ತಿಳಿಸಿದ್ದಾರೆ.

ಅರ್ಜಿ 18 ಅಥವಾ 19 ಅನ್ನು ನ.6ರವರೆಗೆ ಸ್ವೀಕರಿಸಲಾಗಿದ್ದು, ಅದರಂತೆ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ಡಿ.9ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದವರು ಪಟ್ಟಿಯಲ್ಲಿ ಹೆಸರಿರುವುದರ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಅರ್ಹ ಶಿಕ್ಷಕರು ಹಾಗೂ ಪದವೀಧರರು ಡಿ.9ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

ಈಶಾನ್ಯ, ನೈರುತ್ಯ, ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಆಗ್ನೇಯ, ನೈರುತ್ಯ ಶಿಕ್ಷಕರ ಕ್ಷೇತ್ರಗಳ ಸದಸ್ಯರ ಅವಧಿ 2024ರ ಜೂನ್‌ 6ರಂದು ಮುಗಿಯಲಿದೆ. ನೈರುತ್ಯ ಪದವೀಧರರ ಕ್ಷೇತ್ರದ ಸದಸ್ಯ ಆಯನೂರು ಮಂಜುನಾಥ ಅವರು ರಾಜೀನಾಮೆ ನೀಡಿರುವುದರಿಂದ ಸ್ಥಾನ ಏ.19ರಿಂದ ಖಾಲಿ ಉಳಿದಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಸದಸ್ಯ ಪುಟ್ಟಣ್ಣ ಅವರು ರಾಜೀನಾಮೆ ನೀಡಿದ್ದರಿಂದ ಮಾರ್ಚ್‌ 16ರಿಂದ ಖಾಲಿ ಉಳಿದಿದೆ. ಈ ಎರಡೂ ಕ್ಷೇತ್ರಗಳಿಗೆ ಡಿ–ನೊವೊ ಪ್ರಕ್ರಿಯೆ ನಡೆಯುತ್ತಿದ್ದರಿಂದ ಮತದಾರರ ಪಟ್ಟಿ ಸಿದ್ಧವಾಗದ ಕಾರಣ ಮರು ಚುನಾವಣೆ ನಡೆದಿರಲಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT