ಬೆಂಗಳೂರು: ‘ಭರತನಾಟ್ಯ ಕಲಾವಿದೆಯಾದ ಪತ್ನಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗಾಗಿ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಿದ್ದಾರೆ’ ಎಂಬ ಆರೋಪದಡಿ ಪತಿಯೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

‘ನನ್ನ ವಿರುದ್ಧ ನನ್ನ ಪತ್ನಿ ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಪತಿ (28) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಅರ್ಜಿಯನ್ನು ಭಾಗಶಃ ಪುರಸ್ಕರಿಸಿದ್ದು, ಪತಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

‘ದಂಪತಿ ಮಧ್ಯದ ವಾಟ್ಸ್ ಆ್ಯಪ್ ಸಂಭಾಷಣೆ ಅತ್ಯಂತ ಭಯಾನಕ ಮತ್ತು ಅಶ್ಲೀಲವಾಗಿದ್ದು, ಅದನ್ನು ವಿವರಿಸುವುದಕ್ಕೂ ಸಾಧ್ಯವಿಲ್ಲ’ ಎಂದು ಆಘಾತ ವ್ಯಕ್ತಪಡಿಸಿರುವ ನ್ಯಾಯಪೀಠ, ‘ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ಪತಿ, ಪತ್ನಿಗೆ ಚಿತ್ರಹಿಂಸೆ ನೀಡಿರುವುದು ಮನದಟ್ಟಾಗುವಂತಿದೆ’ ಎಂದು ಹೇಳಿದೆ.

‘ಮದುವೆಯಾದ ಒಂದೇ ವರ್ಷದಲ್ಲಿ ಏನೆಲ್ಲಾ ನಡೆದಿದೆ ಎಂಬ ಅಂಶಗಳಲ್ಲಿ, ಪತಿ ತನ್ನ ಪತ್ನಿಯ ಕೈ ತಿರುಗಿಸಿ, ಕೈಗೆ ಗಾಯ ಮಾಡಿ ಆಸ್ಪತ್ರೆಗೆ ಸೇರುವಂತೆ ಮಾಡಿರುವ ಹಿಂಸಾತ್ಮಕ ಸನ್ನಿವೇಶಗಳನ್ನು ಗಮನಿಸಿದರೆ ಅರ್ಜಿದಾರರು ತಮ್ಮ ಪತ್ನಿಗೆ ಏನೆಲ್ಲಾ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದಾರೆ ಎಂಬುದು ವೇದ್ಯವಾಗುತ್ತದೆ. ಆದ್ದರಿಂದ, ಈ ಪ್ರಕರಣದಲ್ಲಿ ಪೂರ್ಣ ಪ್ರಮಾಣದ ವಿಚಾರಣೆಯ ಅಗತ್ಯವಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿ ವಜಾಗೊಳಿಸಿದೆ.

‘ವರದಕ್ಷಿಣೆ ಕಿರುಕುಳ ನೀಡಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ’ ಎಂದು ಪ್ರತಿಪಾದಿಸಿದ್ದ ಪತಿಯ ಪರ ವಕೀಲರು, ‘ಅರ್ಜಿದಾರರ ತಂದೆ ಮತ್ತು ತಾಯಿಯನ್ನು ಪ್ರಕರಣದಲ್ಲಿ ವಿನಾಕಾರಣ ಎಳೆದು ತರಲಾಗಿದೆ. ಹೀಗಾಗಿ, ಪ್ರಕರಣ ರದ್ದುಗೊಳಿಸಬೇಕು’ ಎಂದು ಮನವಿ ಮಾಡಿದ್ದರು.

ಈ ಮನವಿಯನ್ನು ಭಾಗಶಃ ಮಾನ್ಯ ಮಾಡಿರುವ ನ್ಯಾಯಪೀಠ, ಭರತನಾಟ್ಯ ಮುಂದುವರಿಸದಂತೆ ತಾಕೀತು ಮಾಡಿದ ಆರೋಪ ಎದುರಿಸುತ್ತಿದ್ದ ಪತ್ನಿಯ ಅತ್ತೆ ಮತ್ತು ಮಾವನ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.

ಕೋರಿಕೆ ಏನಿತ್ತು?: ‘ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 115 (2), 351(3), 352 ಹಾಗೂ 85 ಹಾಗೂ ವರದಕ್ಷಿಣೆ ತಡೆ ಕಾಯ್ದೆ–1961ರ ಕಲಂ 3 ಮತ್ತು 4ರ ಅನ್ವಯ ನನ್ನ ವಿರುದ್ಧ 2024ರ ಡಿಸೆಂಬರ್ 2ರಂದು ದಾಖಲಿಸಲಾಗಿರುವ ಎಫ್ಐಆರ್ ಮತ್ತು ಇದಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿರುವ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಪತಿ ಈ ರಿಟ್ ಅರ್ಜಿ ಸಲ್ಲಿಸಿದ್ದರು.

ನಾನು ಬೆಕ್ಕಿಗಿಂತಲೂ ಕಡೆಯಾಗಿದ್ದೆ...

‘ನನ್ನ ಪತಿ ಮದುವೆಯಾದ ನಂತರ ಹಲವು ಮಹಿಳೆಯರ ಜೊತೆ ಅಕ್ರಮ ಸಂಬಂಧ ಹೊಂದಿದ್ದರು. ಕುಡಿತ ಮತ್ತು ಆನ್ಲೈನ್ ಬೆಟ್ಟಿಂಗ್ನಲ್ಲಿ ನಿರತರಾಗಿರುತ್ತಿದ್ದರು. ಭರತನಾಟ್ಯ ಕಲಾವಿದೆಯಾದ ನನಗೆ ನನ್ನ ಅತ್ತೆ–ಮಾವ ಭರತನಾಟ್ಯ ನೃತ್ಯಾಭ್ಯಾಸ ನಿಲ್ಲಿಸುವಂತೆ ಒತ್ತಾಯಿಸುತ್ತಿದ್ದರು. ನಿಲ್ಲಿಸುವುದಿಲ್ಲ ಎಂದಾಗ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಿಂಸಿಸುವುದು ಸಾಮಾನ್ಯವಾಗಿತ್ತು. ನನ್ನ ಪತಿ ಮನೆಯಲ್ಲಿ ನನಗಿಂತಲೂ ಚೆನ್ನಾಗಿ ಬೆಕ್ಕನ್ನು ನೋಡಿಕೊಳ್ಳುತ್ತಾರೆ’ ಎಂದು ಪತ್ನಿ ದೂರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.