ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರೋನ್‌ ಹಾರಾಟ: ಪತ್ರಕರ್ತ ವಿಶ್ವೇಶ್ವರ ಭಟ್‌ಗೆ RFO ನೋಟಿಸ್‌

Published 13 ಜನವರಿ 2024, 20:32 IST
Last Updated 13 ಜನವರಿ 2024, 20:32 IST
ಅಕ್ಷರ ಗಾತ್ರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಡ್ರೋನ್‌ ಕ್ಯಾಮೆರಾದಲ್ಲಿ ಚಿತ್ರೀಕರಣ ಮಾಡಿದ್ದ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರಿಗೆ ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯ ಅಧಿಕಾರಿ ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ. 

‘‌ಬೆಟ್ಟದಲ್ಲಿ ಅನುಮತಿ ಇಲ್ಲದೆ ಡ್ರೋನ್‌ ಮೂಲಕ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದೀರಿ. ಇದು ವನ್ಯಜೀವಿ ಸಂರಕ್ಷಣೆ ಕಾಯ್ದೆ 1972ರ ಸೆಕ್ಷನ್‌ 28, 1(ಬಿ) ಉಲ್ಲಂಘನೆ. ಬೆಟ್ಟದ ತಪ್ಪಲಿನಿಂದ ಬೆಟ್ಟಕ್ಕೆ ತೆರಳಲು ಸಂಜೆ 4 ಗಂಟೆಯವರೆಗೆ ಮಾತ್ರ ಅವಕಾಶ ಇರುತ್ತದೆ. ನೀವು ಚಿತ್ರಗಳನ್ನು ಪೋಸ್ಟ್‌ ಮಾಡಿ ಸಂಜೆ 6 ಗಂಟೆಗೆ ಎಂದು ನಮೂದಿಸಿದ್ದೀರಿ. ಈ ಪತ್ರ ತಲುಪಿದ ಕೂಡಲೇ ಕಚೇರಿಗೆ ಹಾಜರಾಗಿ ಈ ಎರಡು ವಿಷಯಗಳ ಬಗ್ಗೆ ಸ್ಪಷ್ಟೀಕರಣ ನೀಡಬೇಕು’ ಎಂದು ನೋಟಿಸ್‌ನಲ್ಲಿ ಆರ್‌ಎಫ್‌ಒ ಮಂಜುನಾಥ್‌ ಹೇಳಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT