ಬೆಂಗಳೂರು: ರಕ್ಷಣಾ ಇಲಾಖೆಗೆ ಸಂಬಂಧಿಸಿದಂತೆ ಕಾನೂನುಬದ್ಧ ಸಂಶೋಧನೆ, ಅಭಿವೃದ್ಧಿ ಮತ್ತು ಪರೀಕ್ಷಾ ಕಾರ್ಯಾಚರಣೆಯ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗೆ ಹೈಕೋರ್ಟ್ ಚಾಟಿ ಬೀಸಿದೆ.

‘ಸೇನೆಗೆ ಡ್ರೋನ್ಗಳನ್ನು ಪೂರೈಸುವ ನಗರದ ಖಾಸಗಿ ಸಂಸ್ಥೆಯೊಂದು ಡ್ರೋನ್ ಮಾದರಿಯನ್ನು ಪರೀಕ್ಷಿಸುವಾಗ ತನ್ನ ಪರೀಕ್ಷಾ ಪರಿಧಿಯನ್ನು ದಾಟಿ ಖಾಸಗಿಯವರ ಸ್ವತ್ತಿನ ಕಾಂಪೌಂಡ್ ಒಳಗೆ ಇಳಿದು ಅಕ್ರಮ ಪ್ರವೇಶ ಮಾಡಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ದೂರನ್ನು ಪ್ರಶ್ನಿಸಲಾದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ನಮ್ಮ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ‘ಮೆಸರ್ಸ್ ನ್ಯೂ ಸ್ಪೇಸ್ ರೀಸರ್ಚ್ ಅಂಡ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿ’ಯ ಅಧಿಕೃತ ಪ್ರತಿನಿಧಿ ಶರತ್ ಕುಮಾರ್ ಈ ಅರ್ಜಿ ಸಲ್ಲಿಸಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅಂಗದ ಕಾಮತ್, ‘ಅರ್ಜಿದಾರರ ಕಂಪನಿ ರಕ್ಷಣಾ ಸಚಿವಾಲಯಕ್ಕೆ ಡ್ರೋನ್ಗಳನ್ನು ತಯಾರಿಸುವ ಕಂಪನಿಯಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿಯ ಅಂಗವಾಗಿ ಪರೀಕ್ಷಾರ್ಥ ಹಾರಾಟ ನಡೆಸಿದ್ದ ಕಂಪನಿಯ ಡ್ರೋನ್ ಖಾಸಗಿಯವರ ಜಮೀನಿನಲ್ಲಿ ಇಳಿದಿದೆ’ ಎಂದರು.

‘ಈ ಸಂಬಂಧ ಅರ್ಜಿದಾರ ಕಂಪನಿಯ ಪ್ರತಿನಿಧಿಗಳನ್ನು ಠಾಣೆಗೆ ಕರೆಯಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ನಿಮ್ಮ ಕಂಪನಿ ಏನ ಕೆಲಸ ಮಾಡುತ್ತದೆ ಮತ್ತು ಲಾಭ ನಷ್ಟಗಳೇನು ಮತ್ತು ಅದರ ಲೆಕ್ಕಪತ್ರಗಳನ್ನೆಲ್ಲಾ ಸಲ್ಲಿಸಿ ಎಂದು ತಾಕೀತು ಮಾಡಿದ್ದಾರೆ. ಮಾತ್ರವಲ್ಲ, ಎಫ್ಐಆರ್ ದಾಖಲಿಸಿರುವ ಬಗ್ಗೆಗಿನ ಪ್ರತಿಯನ್ನು ಅರ್ಜಿದಾರರಿಗೆ ನೀಡದೆ ಸತಾಯಿಸಿದ್ದಾರೆ’ ಎಂದು ಆರೋಪಿಸಿದರು.

ಇದಕ್ಕೆ ಪ್ರಾಸಿಕ್ಯೂಷನ್ ಪರ ಹಾಜರಿದ್ದ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್, ‘ಪೊಲೀಸರಿಂದ ಲೋಪವಾಗಿರುವುದು ನಿಜ. ಈ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಲಾಗುವುದು’ ಎಂದರು.

‘ಅರ್ಜಿದಾರರಿಗೆ ಎಫ್ಐಆರ್ ಪ್ರತಿ ನೀಡದೆ ಸತಾಯಿಸಿ ಕಿರುಕುಳ ನೀಡಿರುವ ಆರೋಪದ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಸೂಕ್ತ ಪ್ರಮಾಣ ಪತ್ರ ಸಲ್ಲಸಿ ವಿವರಣೆ ನೀಡಬೇಕು’ ಎಂದು ತಾಕೀತು ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 13ಕ್ಕೆ ಮುಂದೂಡಿತು.

ಅರ್ಜಿದಾರರ ವಿರುದ್ಧ, ಭಾರತೀಯ ನ್ಯಾಯ ಸಂಹಿತಾ– 2023ರ ಕಲಂ 125 ಮತ್ತು 329(3)ರ ಅಡಿಯಲ್ಲಿನ ಅಪರಾಧಗಳಿಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.