ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿದ್ದಾರೆ.

ಗುರುವಾರ ಟ್ವೀಟ್ ಮಾಡಿರುವ ಅವರು ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಟ್ವೀಟ್ ಮಾಡಿದ್ದಾರೆ.

ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದ್ದು ಕೂಡಲೇ ಸರ್ಕಾರ ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.