ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ: ಕೇಂದ್ರ ನೆರವಿಗೆ ಈರಣ್ಣ ಕಡಾಡಿ ಆಗ್ರಹ

Published 21 ಡಿಸೆಂಬರ್ 2023, 14:52 IST
Last Updated 21 ಡಿಸೆಂಬರ್ 2023, 14:52 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಬರಗಾಲದಿಂದ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದು, ಕೇಂದ್ರ ಸರ್ಕಾರವು ನೆರವಿಗೆ ಬರಬೇಕು ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು. 

ರಾಜ್ಯಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದಲ್ಲಿ ಈ ವರ್ಷ ಶೇ 65ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ 14 ಜಲಾಶಯಗಳಲ್ಲಿ ಶೇ 45ರಷ್ಟು ನೀರಿದೆ. ಬರಗಾಲದಿಂದಾಗಿ ಅಂತರ್ಜಲ ಮಟ್ಟ ಶೇ 11ರಷ್ಟು ಕುಸಿದಿದೆ’ ಎಂದು ಗಮನ ಸೆಳೆದರು. 

ಈ ಆರ್ಥಿಕ ವರ್ಷದಲ್ಲಿ 456 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ರಾಜ್ಯ ಸರ್ಕಾರ ಜನರ ನೆರವಿಗೆ ಧಾವಿಸದೆ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿ ತೋರಿಸುತ್ತಿದೆ ಎಂದು ದೂರಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT