ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬರ ಪರಿಹಾರ: ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ₹ 105 ಕೋಟಿ ಬಿಡುಗಡೆ

Published 5 ಜನವರಿ 2024, 15:54 IST
Last Updated 5 ಜನವರಿ 2024, 15:54 IST
ಅಕ್ಷರ ಗಾತ್ರ

ಬೆಂಗಳೂರು: ಬರಗಾಲದಿಂದ ಬೆಳೆ ನಷ್ಟಕ್ಕೀಡಾಗಿರುವ ರೈತರಿಗೆ ಮೊದಲನೇ ಕಂತಿನಲ್ಲಿ ತಲಾ ₹ 2,000 ಪರಿಹಾರ ವಿತರಣೆಗಾಗಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ₹ 105 ಕೋಟಿ ಅನುದಾನವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ಕೇಂದ್ರ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್‌) ನೆರವು ನಿರೀಕ್ಷಿಸಿ ಎಸ್‌ಡಿಆರ್‌ಎಫ್‌ನಿಂದ ಒಬ್ಬ ರೈತರಿಗೆ ಎರಡು ಹೆಕ್ಟೇರ್‌ ಜಮೀನಿಗೆ ಸೀಮಿತವಾಗಿ ಪರಿಹಾರ ವಿತರಿಸಲಾಗುತ್ತಿದೆ. ಶೇಕಡ 33ಕ್ಕಿಂತ ಹೆಚ್ಚಿನ ಬೆಳೆ ಹಾನಿಯಾಗಿರುವ ರೈತರಿಗೆ ಮಾತ್ರ ಪರಿಹಾರ ವಿತರಿಸಲಾಗುವುದು. ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿರುವ ಎಸ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ‘ಇನ್‌ಪುಟ್ ಸಬ್ಸಿಡಿ’ ವಿತರಿಸಲಾಗುವುದು ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಪ್ರತಿ ಹೆಕ್ಟೇರ್‌ಗೆ ಮಳೆಯಾಶ್ರಿತ ಬೆಳೆಗಳಿಗೆ ₹ 8,500, ನೀರಾವರಿ ಬೆಳೆಗಳಿಗೆ ₹ 17,000 ಮತ್ತು ಬಹುವಾರ್ಷಿಕ ಬೆಳೆಗಳಿಗೆ ₹ 22,500 ಪರಿಹಾರ ನಿಗದಿಪಡಿಸಲಾಗಿದೆ. ಅದರಲ್ಲಿ ಮೊದಲ ಕಂತಿನಲ್ಲಿ ₹ 2,000 ಪಾವತಿಸಲಾಗುತ್ತದೆ. ಫ್ರೂಟ್ಸ್‌ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT