ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬರ– ರಾಜ್ಯದಾದ್ಯಂತ ಹೋರಾಟ: ಆರ್.ಅಶೋಕ

Published 16 ಜನವರಿ 2024, 15:48 IST
Last Updated 16 ಜನವರಿ 2024, 15:48 IST
ಅಕ್ಷರ ಗಾತ್ರ

ನವದೆಹಲಿ: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಕರ್ನಾಟಕ ಸರ್ಕಾರ ನಯಾಪೈಸೆ ಪರಿಹಾರ ನೀಡಿಲ್ಲ. ಇದರ ವಿರುದ್ಧ ರಾಜ್ಯದಾದ್ಯಂತ ಪ್ರವಾಸ ಮಾಡಿ ಹೋರಾಟ ಮಾಡಲಾಗುವುದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು. 

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ‌ನ್ನು ಭೇಟಿಯಾದ ಬಳಿಕ ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟದಲ್ಲಿರುವ ರೈತರಿಗೆ ₹100 ಕೋಟಿ, ಮುಲ್ಲಾಗಳಿಗೆ ₹10 ಸಾವಿರ ಕೋಟಿ ಕೊಡಲು ಮುಂದಾಗಿದ್ದಾರೆ. ರೈತರಿಗೆ ಕಣ್ಣಿಗೆ ಸುಣ್ಣ ಎಂಬಂತೆ ಆಗಿದೆ. ಇಂತಹ ಆಟ ಬಹಳ ದಿನ ನಡೆಯುವುದಿಲ್ಲ’ ಎಂದರು. 

‘ವಿ.ಸೋಮಣ್ಣ ಅಸಮಾಧಾನ ಪ್ರಕರಣ ಸುಖಾಂತ್ಯ ಆಗಿದೆ. ಅವರು ನಮ್ಮ ಜತೆಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಜತೆಗೆ ಪಕ್ಷದ ವರಿಷ್ಠರು ಚರ್ಚಿಸಿದ್ದಾರೆ. ಅವರ ಜತೆಗೆ ಮತ್ತೊಂದು ಸುತ್ತಿನ ಚರ್ಚೆ ಆಗಬೇಕಿದೆ’ ಎಂದು ಅಶೋಕ ಹೇಳಿದರು. 

‘ಹಾವೇರಿ ಅತ್ಯಾಚಾರ ‍ಪ್ರಕರಣವನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ಸರ್ಕಾರ ಪ್ರಯತ್ನಿಸುತ್ತಿದೆ. ಪ್ರಕರಣಕ್ಕೆ ಸಂಬಂಧವಿಲ್ಲದವರನ್ನು ಬಂಧಿಸಲಾಗುತ್ತಿದೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು’ ಎಂದು ಅವರು ಆಗ್ರಹಿಸಿದರು. 

‘ಕೆ.ಜೆ.ಹಳ್ಳಿ. ಡಿ.ಜೆ.ಹಳ್ಳಿ ಗಲಭೆ ಪ್ರಕರಣವನ್ನು ವಾಪಸ್‌ ಪಡೆಯಲು ಕಾಂಗ್ರೆಸ್‌ ಸರ್ಕಾರ ಸಂಚು ನಡೆಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ಅವರು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT