ಬೆಳಗಾವಿ: ‘ಮಾದಕವಸ್ತು ಪ್ರಕರಣದಲ್ಲಿ ಯಾರನ್ನೂ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚಲನಚಿತ್ರ ನಟಿ ಅನುಶ್ರೀ ಇರಲಿ, ಯಾರೇ ಆಗಿರಲಿ ಅವರ ವಿಷಯದಲ್ಲಿ ರಾಜಕೀಯ ಒತ್ತಡವೇನಿಲ್ಲ. ಮಾದಕವಸ್ತು ಪ್ರಕರಣ ಇದಾಗಿರುವುದರಿಂದ ಯಾರೂ ಒತ್ತಡ ಹಾಕುವುದಿಲ್ಲ. ಇಂತಹ ಪ್ರಕರಣದಲ್ಲಿ ನಮ್ಮ ಸರ್ಕಾರವು ಬಹಳಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅಪರಾಧಿ ಎನಿಸಿದವರು ಶಿಕ್ಷೆಗೆ ಗುರಿಯಾಗುವುದು ಖಚಿತ. ಎಷ್ಟೇ ಪ್ರಭಾವಿಗಳಾಗಿದ್ದರೂ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

ಇದನ್ನೂ ಓದಿ:ಡ್ರಗ್ಸ್ ಕೇಸ್ನಲ್ಲಿ ಅನುಶ್ರೀ: ಎಲ್ಲರನ್ನೇಕೆ ಪರೀಕ್ಷಿಸಿಲ್ಲ ಎಂದ ಇಂದ್ರಜಿತ್

‘ಪೊಲೀಸರ ಮೇಲೆ ಒತ್ತಡವಿದೆ ಎನ್ನುವುದು ಊಹಾಪೋಹ. ಯಾರ ಒತ್ತಡಕ್ಕೂ ನಮ್ಮ ಪೊಲೀಸರು ಬಗ್ಗುವುದಿಲ್ಲ’ ಎಂದು ತಿಳಿಸಿದರು.

ಇದನ್ನೂ ಓದಿ:ಡ್ರಗ್ಸ್ ಪ್ರಕರಣ: ಪೊಲೀಸರಿಂದ ಚಾರ್ಜ್ಶೀಟ್, ಅನುಶ್ರೀ ಹೆಸರು ಉಲ್ಲೇಖ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.