ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಾದಕದ್ರವ್ಯ ಮುಕ್ತ ಕರ್ನಾಟಕ’ ರೂಪಿಸಿ: ಜಿ. ಪರಮೇಶ್ವರ ಸೂಚನೆ

ಪೊಲೀಸ್‌ ಅಧಿಕಾರಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ
Published 2 ಜನವರಿ 2024, 23:21 IST
Last Updated 2 ಜನವರಿ 2024, 23:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕವನ್ನು ‘ಮಾದಕದ್ರವ್ಯ ಮುಕ್ತ’ ರಾಜ್ಯವಾಗಿ ಮಾಡಬೇಕು ಎಂಬುದು ನನ್ನ ಗುರಿ. ಮುಖ್ಯಮಂತ್ರಿ ಕೂಡಾ ಇದೇ ಆಶಯ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕ್ರಿಯಾ ಯೋಜನೆ ರೂಪಿಸಬೇಕು’ ಎಂದು ಪೊಲೀಸ್‌ ಅಧಿಕಾರಿಗಳಿಗೆ ಗೃಹ ಸಚಿವ ಜಿ. ಪರಮೇಶ್ವರ ಸೂಚನೆ ನೀಡಿದರು. 

ಸದಾಶಿವನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ನಗರ ಪೊಲೀಸ್ ಕಮಿಷನರ್‌ ಬಿ. ದಯಾನಂದ್, ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ರಮಣಗುಪ್ತ, ಸತೀಶ್, ಸಂಚಾರ ವಿಭಾಗದ ಜಂಟಿ ಕಮಿಷನರ್‌ ಎಂ.ಎನ್. ಅನುಚೇತ್ ಸೇರಿದಂತೆ ನಗರದ ಎಲ್ಲ ವಿಭಾಗಗಳ ಡಿಸಿಪಿಗಳ ಜತೆ ಸಚಿವರು ಮಂಗಳವಾರ ಸಭೆ ನಡೆಸಿದರು.

‘ಕೆಲವು ದೇಶಗಳ ಪ್ರಜೆಗಳು ಮಾದಕದ್ರವ್ಯ ಚಟುವಟಿಕೆಯಲ್ಲಿ ಹೆಚ್ಚು ತೊಡಗುತ್ತಿದ್ದಾರೆ. ಹಲವು ವರ್ಷಗಳಿಂದ ನಗರದಲ್ಲಿ ವಾಸಿಸುತ್ತಿರುವ ಹಾಗೂ ನಗರಕ್ಕೆ ಬರುವ ವಿದೇಶಿ ಪ್ರಜೆಗಳ ಮೇಲೆ ಕಣ್ಣಿಡಬೇಕು. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸೂಚನೆ ನೀಡಿದರು.

‘ರಾಜ್ಯದಲ್ಲಿ ಗುಂಪುಗಲಭೆ ಕಡಿಮೆಯಾಗಿವೆ. ಅಮಾಯಕ ಮಕ್ಕಳು ಅಪರಾಧ ಪ್ರಕರಣಗಳಲ್ಲಿ ಸಿಲುಕುತ್ತಿದ್ದು, ಈ ಬಗ್ಗೆ ನಿಗಾವಹಿಸಬೇಕು‌. ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಅರಿವು ಮೂಡಿಸಬೇಕು. ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಶೇ 50ರಷ್ಟು ನಿಯಂತ್ರಣಕ್ಕೆ ಬಂದಿದೆ. ಇದಕ್ಕೆ ಇನ್ನೂ ಹೆಚ್ಚಿನ ಒತ್ತು ನೀಡಬೇಕು’ ಎಂದರು.

‘ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ದೈನಂದಿನ ಅನುಭವಗಳ‌ ಆಧಾರದಲ್ಲಿ ಟಿಪ್ಪಣಿ ತಯಾರಿಸಿ, ಕಮಿಷನರ್‌‌ಗೆ ಕೊಡಬೇಕು. ಇಲಾಖೆಯಲ್ಲಿ‌ ಪದವೀಧರ ಸಿಬ್ಬಂದಿ ಹೆಚ್ಚಾಗಿ ನೇಮಕ ಆಗಿದ್ದಾರೆ. ಇದು ಒಳ್ಳೆಯ ಬೆಳವಣಿಗೆ. ಅವರಲ್ಲಿ ಹೊಸ ಚಿಂತನೆಗಳಿರುತ್ತವೆ. ವಿಶ್ಲೇಷಣೆ ಮಾಡಿಕೊಂಡು ಟಿಪ್ಪಣಿ ಅಥವಾ ವರದಿಯನ್ನು ಮೇಲಧಿಕಾರಿಗಳಿಗೆ ಕೊಡಲಿ. ಇದರಿಂದ ಇಲಾಖೆಯಲ್ಲಿ ಬದಲಾವಣೆ ತರಲು ಅನುಕೂಲವಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT