ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬೈ ಸಾಹಿತ್ಯ ಸಮ್ಮೇಳನ 26ಕ್ಕೆ

Last Updated 11 ಅಕ್ಟೋಬರ್ 2018, 20:15 IST
ಅಕ್ಷರ ಗಾತ್ರ

ಹೊಸದುರ್ಗ: ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ) ದೇಶದ ದುಬೈನಲ್ಲಿ ಅ.26ರಂದು ಆಯೋಜಿ
ಸಿರುವ ಅಂತರರಾಷ್ಟ್ರೀಯ ವಚನ ಸಾಹಿತ್ಯ ಸಮ್ಮೇಳನದ ಮಾಹಿತಿ ಪತ್ರವನ್ನು ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಬುಧವಾರ ಬಿಡುಗಡೆ ಮಾಡಿದರು.

‘ಬಸವಾದಿ ಶಿವಶರಣರ ವಚನ ಸಾಹಿತ್ಯವನ್ನು ವಿಶ್ವದಾದ್ಯಂತ ಪ್ರಚಾರ ಮಾಡುವ ಉದ್ದೇಶದಿಂದ ವಿದೇಶದಲ್ಲಿ ನಡೆಯುತ್ತಿರುವ ಅಂತರ ರಾಷ್ಟ್ರೀಯ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾವು ಪಾಲ್ಗೊಳ್ಳುತ್ತಿದ್ದೇವೆ. ಬಸವ ಪ್ರಜ್ಞೆ ಬಿತ್ತುವ ಇಂತಹ ಕಾರ್ಯಕ್ರಮ ಆಯೋಜಿಸುವುದರಿಂದ ವಚನ ಸಾಹಿತ್ಯದ ಕುರಿತು ವಿದೇಶಿಯರಿಗೂ ಮಾಹಿತಿ ನೀಡಿದಂತಾಗುತ್ತದೆ’ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.

ಬೆಂಗಳೂರಿನ ರಾಷ್ಟ್ರೀಯ ಬಸವ ಪ್ರತಿಷ್ಠಾನ ಹಾಗೂ ದಿವ್ಯಜ್ಯೋತಿ ಸೇವಾ ಟ್ರಸ್ಟ್ ಸಹಯೋಗದಲ್ಲಿ ಅ.26ರಂದು ದುಬೈನ ಬಿಲ್ವ-ಇಂಡಿಯನ್ ಶಾಲೆಯಲ್ಲಿ ಯುಎಇನ 98 ಕನ್ನಡಪರ ಸಂಘಟನೆಗಳ ಸಹಕಾರದೊಂದಿಗೆ ಅಂತರರಾಷ್ಟ್ರೀಯ ವಚನ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಂಡಿತಾರಾಧ್ಯ ಸ್ವಾಮೀಜಿ, ಬಸವಮರುಳಸಿದ್ದ ಸ್ವಾಮೀಜಿ, ಗುರುಬಸವ ಸ್ವಾಮೀಜಿ ಭಾಗವಹಿಸುವರು ಎಂದು ಬಸವ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಸ್.ಎಂ.ಸುರೇಶ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT