ನವದೆಹಲಿ: ಉಕ್ಕು ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮೆಕಾನ್ ಹಾಗೂ ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದ ಸಾಗರೋತ್ತರ ಕಚೇರಿಗಳನ್ನು ದುಬೈನಲ್ಲಿ ಸೋಮವಾರ ಉದ್ಘಾಟಿಸಿದ ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ದುಬೈನ ಪ್ರಮುಖ ಆಡಳಿತಗಾರರೊಂದಿಗೆ ಮಾತುಕತೆ ನಡೆಸಿದರು.

ಯುನೈಟೆಡ್ ಅರಬ್ ಎಮಿರೇಟ್ಸ್ನ ಸುಪ್ರೀಂ ಕೌನ್ಸಿಲ್ ಸದಸ್ಯ ಮತ್ತು ರಾಸ್ ಅಲ್ ಖೈಮಾಹ್ ಆಡಳಿತಗಾರ ಶೇಖ್ ಸೌದ್ ಬಿನ್ ಸಕ್ರ್ ಅಲ್ ಖಾಸಿಮಿ ಅವರೊಂದಿಗೆ ಮಾತುಕತೆ ನಡೆಸಿದರು.

‘ಈ ಭೇಟಿಯು ಭಾರತ ಮತ್ತು ಯುಎಇ ನಡುವೆ ಆಳವಾಗಿ ಬೇರೂರಿರುವ ಮತ್ತು ವಿಕಸನಗೊಳ್ಳುತ್ತಿರುವ ಸದೃಢವಾದ ಪಾಲುದಾರಿಕೆಯನ್ನು ಒತ್ತಿ ಹೇಳುತ್ತದೆ. ಇದು ಪರಸ್ಪರ ಆರ್ಥಿಕ ಹಿತಾಸಕ್ತಿಗಳು, ಸಾಂಸ್ಕೃತಿಕ ಬಾಂಧವ್ಯಗಳು ಮತ್ತು ಅಭಿವೃದ್ಧಿ ಹೊಂದುತ್ತಿರುವ ಭಾರತೀಯ ಸಮುದಾಯದ ಕೊಡುಗೆಯ ಮೇಲೆ ಅವಲಂಬಿತವಾಗಿದೆ. ಯುಎಇಯಲ್ಲಿ ವಾಸಿಸುತ್ತಿರುವ 3.5 ಮಿಲಿಯನ್ಗಿಂತಲೂ ಹೆಚ್ಚು ಭಾರತೀಯರ ಕಲ್ಯಾಣದ ಮೇಲೆ ಕೇಂದ್ರೀಕರಿಸುವ ಮೂಲಕ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ’ ಎಂದು ಕುಮಾರಸ್ವಾಮಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.