ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈತಪ್ಪಿದ ಟಿಕೆಟ್‌: ಡಿವಿಎಸ್ ವಿದಾಯ

Published 14 ಮಾರ್ಚ್ 2024, 0:20 IST
Last Updated 14 ಮಾರ್ಚ್ 2024, 0:20 IST
ಅಕ್ಷರ ಗಾತ್ರ

ಬೆಂಗಳೂರು: ಹತ್ತು ವರ್ಷ ಕೆಲಸ ಮಾಡಲು ಅವಕಾಶ ಕೊಟ್ಟ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರಿಗೆ ಧನ್ಯವಾದ ಹೇಳುವ ಮೂಲಕ, ಹಾಲಿ ಸಂಸದ ಡಿ.ವಿ. ಸದಾನಂದಗೌಡ ಅವರು ವಿದಾಯದ ಮಾತುಗಳನ್ನು ಆಡಿದ್ದಾರೆ. 

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೊರಬೀಳುವ ಮೊದಲೇ ‘ಎಕ್ಸ್‌’ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡ ಸದಾನಂದಗೌಡ ಅವರು, ಟಿಕೆಟ್ ಕೈತಪ್ಪುವುದನ್ನು  ಖಚಿತಪಡಿಸಿದ್ದರು.

‘ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶ ಮಾಡಿಕೊಟ್ಟು ಆಶೀರ್ವಾದ ಮಾಡಿದ್ದೀರಿ. ನಾನು ಶಕ್ತಿಮೀರಿ ನಿಮ್ಮ ಸೇವೆ ಮಾಡುವ ಪ್ರಯತ್ನ ಮಾಡಿದ್ದೇನೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆ ಏಳು ವರ್ಷ ಸಚಿವನಾಗಿ ಕೆಲಸ ಮಾಡುವ ಅವಕಾಶವನ್ನು ನೀವು ಕೊಟ್ಟಿದ್ದೀರಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು’ ಎಂದು ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದವರು.1994ರಿಂದ 2004ರವರೆಗೆ ವಿಧಾನಸಭೆ ಸದಸ್ಯರಾಗಿದ್ದರು. 2004ರಲ್ಲಿ ದಕ್ಷಿಣ ಕನ್ನಡ, 2009ರಲ್ಲಿ ಚಿಕ್ಕಮಗಳೂರು–ಉಡುಪಿ ಕ್ಷೇತ್ರದ ಸಂಸದರೂ ಆಗಿದ್ದರು. 2011 ರಿಂದ 2012 ಅವಧಿಯಲ್ಲಿ ಸುಮಾರು ಒಂದು ವರ್ಷ ಮುಖ್ಯಮಂತ್ರಿಯಾಗಿದ್ದರು. ಬಳಿಕ, ವಿಧಾನಪರಿಷತ್ತಿನ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. 2014 ಹಾಗೂ 2019ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿ ಕಾನೂನು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾಗಿಯೂ ಕೆಲಸ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT