ಬೆಂಗಳೂರು: ‘ನಾಗರಿಕರು ಇನ್ನು ಮುಂದೆ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ‘ಇ-ಸ್ವತ್ತು’ ಅರ್ಜಿ ಸಲ್ಲಿಸಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಇ-ಆಡಳಿತ ಇಲಾಖೆಯ ಅಡಿಯಲ್ಲಿನ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣಾ ನಿರ್ದೇಶನಾಲಯ (ಇಡಿಸಿಎಸ್) ಮೂರು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿವೆ. ಇ-ಆಡಳಿತ ನಿರ್ದೇಶಕ ರಾಹುಲ್ ರತ್ನಂ ಪಾಂಡೆ ಮತ್ತು ಇಡಿಸಿಎಸ್ ನಿರ್ದೇಶನಾಲಯದ ನಿರ್ದೇಶಕರಾದ ಅಪರ್ಣಾ ರಮೇಶ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು ವ್ಯವಸ್ಥೆಗೆ ರಾಜ್ಯದಾದ್ಯಂತ ಇರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಈ ವ್ಯವಸ್ಥೆಯ ಬಗ್ಗೆ ನಾಗರಿಕ ಸೇವಾ ಕೇಂದ್ರಗಳ ನಿರ್ವಾಹಕರಿಗೆ ತರಬೇತಿ ನೀಡಲಾಗುವುದು. ಅಲ್ಲದೆ, ನಿರ್ವಾಹಕರಿಗೆ ಪ್ರತ್ಯೇಕ ಲಾಗಿನ್ ಖಾತೆ ನೀಡಲಾಗುವುದು. ಸೇವೆಗಳ ಸಮನ್ವಯಕ್ಕೆ ಇಲಾಖೆಯ ವತಿಯಿಂದ ನೋಡಲ್ ಅಧಿಕಾರಿಗಳನ್ನೂ ನೇಮಿಸಲಾಗುವುದು’ ಎಂದೂ ಪ್ರಿಯಾಂಕ್ ತಿಳಿಸಿದ್ದಾರೆ.

ಹೊಸ ಖಾತಾ ಪಡೆಯಲು ₹ 45 ಶುಲ್ಕ ನಿಗದಿಪಡಿಸಲಾಗಿದೆ. ಈ ವೆಚ್ಚವನ್ನು ನಾಗರಿಕರೇ ಭರಿಸಬೇಕು. ಇ- ಆಸ್ತಿ ಅರ್ಜಿಗೆ ಬೇಕಾದ ದಾಖಲೆಗಳ ಸ್ಕ್ಯಾನಿಂಗ್ ಮತ್ತು ಅಪ್ಲೋಡ್ ಮಾಡಲು ಪ್ರತಿ ಪುಟಕ್ಕೆ ₹ 5 ಪಾವತಿಸಬೇಕು. ಎಲ್ಲ ನಾಗರಿಕ ಸೇವಾ ಕೇಂದ್ರಗಳು ವರ್ಷದ ಎಲ್ಲ ದಿನಗಳು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕಾರ್ಯನಿರ್ವಹಿಸಲಿವೆ. ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ, ಕಾರ್ಮಿಕರ ದಿನ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಮತ್ತು ಮತದಾನದ ದಿನಗಳಂದು ಈ ಕೇಂದ್ರಗಳಿಗೆ ರಜೆ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.