ಬೆಂಗಳೂರು: ಇ–ತ್ಯಾಜ್ಯ ವಿಲೇವಾರಿಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್ಇಆರ್ಟಿ) ನಿರ್ದೇಶಕಿ ವಿ. ಸುಮಂಗಲ ಅವರನ್ನು ಅಮಾನತು ಮಾಡಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನದಲ್ಲಿರುವ ಡಿಎಸ್ಇಆರ್ಟಿ ವ್ಯಾಪ್ತಿಯಲ್ಲಿ ಬಳಕೆಯಾಗದ ಕಂಪ್ಯೂಟರ್, ಲ್ಯಾಪ್ಟಾಪ್, ಪ್ರೊಜೆಕ್ಟರ್ಗಳು, ಬ್ಯಾಟರಿ ಸೇರಿದಂತೆ ಎಲೆಕ್ಟ್ರಾನಿಕ್ಸ್ ಹಾಗೂ ಎಲೆಕ್ಟ್ರಿಕಲ್ ಉಪಕರಣಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಈ ಎಲ್ಲ ಇ–ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿಯಮದಂತೆ ಅರ್ಹತೆ ಪಡೆಯದ ಕಂಪನಿಗೆ ಟೆಂಡರ್ ನೀಡಲಾಗಿತ್ತು. ಕಾರ್ಯಾದೇಶ ಹೊರಡಿಸುವ ಮೊದಲು ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನೂ ಪಡೆದಿರಲಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಪಾಲನೆ ಮಾಡದ ಕಂಪನಿಗೆ ಅತ್ಯಂತ ಕಡಿಮೆ ದರಕ್ಕೆ ಟೆಂಡರ್ ನೀಡುವ ಮೂಲಕ ಸರ್ಕಾರಕ್ಕೆ ₹1.62 ಕೋಟಿ ನಷ್ಟ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

ಹಗರಣ ನಡೆದಿರುವ ಮಾಹಿತಿ ದೊರೆತ ತಕ್ಷಣ ಸಚಿವ ಮಧು ಬಂಗಾರಪ್ಪ ಅವರು ತನಿಖೆ ನಡೆಸಲು ಸೂಚಿಸಿದ್ದರು. ತನಿಖೆ ನಡೆಸಿದ ಇಲಾಖೆಯ ಮುಖ್ಯ ಲೆಕ್ಕಾಧಿಕಾರಿ ಅವರು ಆಯುಕ್ತರಿಗೆ ವರದಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.