ರಾಮನಗರ: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಕೇಳಿದ್ದು, ಈ ಬಗ್ಗೆ ಸದ್ಯದಲ್ಲೇ ತೀರ್ಮಾನ ಮಾಡುತ್ತೇವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿ ಬುಧವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ' ಕಾಂಗ್ರೆಸ್ ನಾಯಕರು ನಮಗೆ ಜೆಡಿಎಸ್ ಬೆಂಬಲ ಬೇಡ ಎಂದು ಹೇಳಿದ್ದಾರೆ. ಕರೆಯದೇ ಇರುವವರ ಮನೆಯ ಬಾಗಿಲಿಗೆ ಹೋಗಲು ಆಗದು' ಎಂದರು.

ಮೋದಿ ಅವರಿಗೆ ದೇವೇಗೌಡರ ಮೇಲೆ ಅಪಾರ ವಿಶ್ವಾಸ ಹಾಗೂ ಗೌರವ ಇದೆ. ಹಾಸನದಲ್ಲಿ ಐಐಟಿ ಸ್ಥಾಪನೆ ವಿಚಾರದಲ್ಲಿ ಗೌಡರು ಮೋದಿಯವರನ್ನು ಭೇಟಿ ಮಾಡಿದ್ದಾರೆ. ಮೈತ್ರಿ ಕುರಿತು ಅವರಿಬ್ಬರ ಬಗ್ಗೆ ಮಾತುಕತೆ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ದೇವೇಗೌಡರು ದೆಹಲಿಯಿಂದ ಬಂದ ಬಳಿಕ ಈ ಬಗ್ಗೆ ಮಾತುಕತೆ ನಡೆಸುತ್ತೇನೆ ಎಂದರು.

ಪರಿಷತ್ ಚುನಾವಣೆಯು ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಅಲ್ಲ. ಆದರೆ ಚುನಾಯಿತ ಪ್ರತಿನಿಧಿಗಳ ಬೆಂಬಲ ಯಾರಿಗೆ ಎಂಬುದು ಗೊತ್ತಾಗಲಿದೆ ಎಂದರು.

ಪಕ್ಷ ಬಯಸಿದರೆ ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ನಿಖಿಲ್ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ ' ಇದಕ್ಕೆ ಇನ್ನೂ ಎರಡು ವರ್ಷ ಸಮಯ ಇದೆ. ನೋಡೋಣ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.