ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಐಎಡಿಬಿ: ಮುಂದುವರಿದ ಶೋಧ

Published : 10 ಆಗಸ್ಟ್ 2024, 16:20 IST
Last Updated : 10 ಆಗಸ್ಟ್ 2024, 16:20 IST
ಫಾಲೋ ಮಾಡಿ
Comments

ಬೆಂಗಳೂರು: ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕಾಗಿ ವಿವಿಧೆಡೆ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ರೈತರ ಹೆಸರಿನಲ್ಲಿ ಅನ್ಯರಿಗೆ ಪರಿಹಾರ ವಿತರಿಸಿ, ವಂಚಿಸಿರುವ ಪ್ರಕರಣದ ತನಿಖೆಯನ್ನು ಶುಕ್ರವಾರ ಆರಂಭಿಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಬೆಂಗಳೂರು ಮತ್ತು ಧಾರವಾಡ ಕಚೇರಿಗಳಲ್ಲಿ ಶನಿವಾರವೂ ಶೋಧಕಾರ್ಯ ನಡೆಸಿದರು.

ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ 2012ರಲ್ಲಿ ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಒಮ್ಮೆ ಪರಿಹಾರ ನೀಡಲಾಗಿತ್ತು. 2021ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ 14 ಮಂದಿಗೆ ₹ 19.9 ಕೋಟಿ ಪರಿಹಾರ ವಿತರಿಸಲಾಗಿತ್ತು. ಈ ಕುರಿತು ಧಾರವಾಡದ ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಲಾಗಿತ್ತು.

ಇದೇ ರೀತಿ ಇನ್ನೂ ಕೆಲವು ಪ್ರಕರಣಗಳಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪರಿಹಾರ ವಿತರಿಸಿರುವ ಕುರಿತು ತನಿಖೆ ನಡೆಯುತ್ತಿದೆ. ಶೋಧದ ವೇಳೆ ಮಹತ್ವದ ದಾಖಲೆ ವಶಪಡಿಸಿಕೊಂಡಿರುವ ಅಧಿಕಾರಿಗಳು, ಭಾರಿ ಪ್ರಮಾಣದ ನಗದನ್ನು ವಶಪಡಿಸಿಕೊಂಡಿದ್ದಾರೆ ಎಂದೂ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT