ಬೆಂಗಳೂರು: ಬಿಟ್ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ಹಣಕಾಸು ವಹಿವಾಟು ನಡೆದಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರ ಮಕ್ಕಳು ಹಾಗೂ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ರೆಹಮಾನ್ ಖಾನ್ ಅವರ ಮೊಮ್ಮಗನ ನಿವಾಸವೂ ಸೇರಿ ಒಟ್ಟು 12 ಕಡೆ ಸೋಮವಾರ ಜಾರಿ ನಿರ್ದೇಶನಾಲಯ (ಇ.ಡಿ) ಶೋಧ ನಡೆಸಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರೂ ಆಗಿರುವ ಎನ್.ಎ. ಹ್ಯಾರಿಸ್ ಅವರ ಮಕ್ಕಳಾದ ಕಾಂಗ್ರೆಸ್ನ ಯುವ ಮುಖಂಡ ಮೊಹಮ್ಮದ್ ನಲಪಾಡ್, ಒಮರ್ ಫಾರೂಕ್ ನಲಪಾಡ್ ಹಾಗೂ ಕೆ.ರೆಹಮಾನ್ ಖಾನ್ ಅವರ ಮೊಮ್ಮಗ ಅಕೀಬ್ ಖಾನ್ ಅವರ ಮನೆ, ಕಚೇರಿ ಮತ್ತು ಶ್ರೀಕಿ ನಿವಾಸದಲ್ಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಶೋಧ ನಡೆಸಿತು.

ಬೆಂಗಳೂರು ನಗರ ಸೇರಿ ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ಶೋಧ ನಡೆದ ವೇಳೆ ಕೆಲವು ದಾಖಲೆಗಳು ಹಾಗೂ ಮೊಬೈಲ್, ಲ್ಯಾಪ್ಟಾಪ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು ಎಂದು ಇ.ಡಿ. ಮೂಲಗಳು ತಿಳಿಸಿವೆ.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) 2002ರಡಿ ನಡೆದ ತನಿಖೆಯಲ್ಲಿ, ಮೊಹಮ್ಮದ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರು ಶ್ರೀಕಿ ಅವರ ಆಪ್ತರು ಮತ್ತು ಅಕ್ರಮ ಹಣದ ಮುಖ್ಯ ಪಾಲುದಾರರು ಎಂಬುದು ಪತ್ತೆಯಾಗಿದೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಭಾರಿ ಸುದ್ದಿಯಾಗಿದ್ದ ಬಹುಕೋಟಿ ಬಿಟ್ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜೊತೆ ವ್ಯಾವಹಾರಿಕ ನಂಟು ಹೊಂದಿರುವ ಆರೋಪ ಮೊಹಮ್ಮದ್ ನಲಪಾಡ್ ವಿರುದ್ಧ ಕೇಳಿಬಂದಿತ್ತು.

ಹಿಂದೆ ವಿಶೇಷ ತನಿಖಾ ದಳ ಮೊಹಮ್ಮದ್ ಅವರನ್ನು ವಿಚಾರಣೆ ಗೊಳಪಡಿಸಿತ್ತು. ಬಿಟ್ಕಾಯಿನ್ ಪ್ರಕರಣ ಪತ್ತೆಯಾಗುವುದಕ್ಕೂ ಮೊದಲ ಆರು ವರ್ಷಗಳ ಅವಧಿಯಲ್ಲಿ ಮೊಹಮ್ಮದ್ ಮತ್ತು ಶ್ರೀಕಿ ಮಧ್ಯೆ ನಿರಂತರ ಹಣಕಾಸು ವ್ಯವಹಾರ ನಡೆದಿದೆ. ಈ ಅವಧಿಯಲ್ಲಿ ಒಟ್ಟು ₹4.65 ಕೋಟಿ ಹಣ ಕೈ ಬದಲಾಗಿದೆ. ಬಿಟ್ಕಾಯಿನ್ ವಹಿವಾಟಿಗೂ ಇದಕ್ಕೂ ಸಂಬಂಧವಿದೆಯೇ ಅಥವಾ ಇದು ಬೇರೆ ಅಕ್ರಮ ವಹಿವಾಟು ಆಗಿರಬಹುದೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಇ.ಡಿ ಮೂಲಗಳು ತಿಳಿಸಿವೆ.

2017ರಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವೆಬ್ಸೈಟ್ಗಳನ್ನುಹ್ಯಾಕ್ ಮಾಡಿ ಬಿಟ್ಕಾಯಿನ್ಗಳನ್ನುಕಳವು ಮಾಡಿ ಅವುಗಳನ್ನು ಕ್ರಿಪ್ಟೋ ಪ್ಲಾಟ್ಫಾರ್ಮ್ಗಳ ಮೂಲಕ ಮಾರಾಟ ಮಾಡಿದ ಆರೋಪದ ಮೇಲೆ ಶ್ರೀಕಿ ಮತ್ತು ಅವರ ಸಹಚರರ ವಿರುದ್ಧ ರಾಜ್ಯ ಪೊಲೀಸರು ಸಲ್ಲಿಸಿದ ಎಫ್ಐಆರ್ಗಳು ಮತ್ತು ಆರೋಪ ಪಟ್ಟಿಗಳಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣ ಗೊತ್ತಾಯಿತು. ಈ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್, ಒಮರ್ ಫಾರೂಕ್ ನಲಪಾಡ್ ಮತ್ತು ಅಕೀಬ್ ಖಾನ್ ಅವರು ಶಾಮೀಲಾಗಿರುವ ಶಂಕೆಯ ಮೇರೆಗೆ ಇ.ಡಿ ಶೋಧ ನಡೆಸಿದೆ.

ಈ ಹಿಂದೆ ಯುವ ಕಾಂಗ್ರೆಸ್ ಅಧ್ಯಕ್ಷ ರಾಗಿದ್ದ ಮೊಹಮ್ಮದ್ ನಲಪಾಡ್ ಅವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಒಳಪಡಿಸಿತ್ತು. ಆಗ ಅವರು, ‘ನಾನು ಮತ್ತು ನನ್ನ ಸಹೋದರ ಯಾವುದೇ ಅಕ್ರಮವೆಸಗಿಲ್ಲ. ಅಲ್ಲದೇ ತನಿಖಾ ಸಂಸ್ಥೆ ಆರೋಪ ಮಾಡಿದಂತೆ ಅಕ್ರಮವಾಗಿ ಹಣ ಪಡೆದುಕೊಂಡಿಲ್ಲ’ ಎಂದು ಹೇಳಿದ್ದರು.

ತನಿಖೆಯ ಭಾಗವಾಗಿ ಶ್ರೀಕಿಯನ್ನು ರಾಜ್ಯ ಪೊಲೀಸರು ಬಂಧಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-51-709036144

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.