ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಬೆಂಗಳೂರು ನಿವಾಸ, ಕಚೇರಿ ಸೇರಿದಂತೆ ಅವರಿಗೆ ಸೇರಿದ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಉದ್ಯಮಿಯೂ ಆಗಿರುವ ಸುಬ್ಬಾರೆಡ್ಡಿ ವಿವಿಧ ದೇಶಗಳಲ್ಲಿ ಆಸ್ತಿ ಮತ್ತು ವಿದೇಶಗಳಲ್ಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ.
ಅಕ್ರಮವಾಗಿ ಹಣ ವರ್ಗಾವಣೆ ವಿಚಾರವಾಗಿ ದಾಳಿ ನಡೆದಿದೆ ಎನ್ನಲಾಗಿದೆ.

ಶಾಸಕ ಸುಬ್ಬಾರೆಡ್ಡಿ ಕುಟುಂಬ ಸದಸ್ಯರು ಹೊಂದಿರುವ ವಿದೇಶಿ ಆಸ್ತಿ ಮತ್ತು ಅವರ ಉದ್ಯಮ ಪಾಲುದಾರರಿಗೆ ಸೇರಿದ ಆಸ್ತಿ ಮೇಲೆ ದಾಳಿ ನಡೆದಿದೆ. ವಿದೇಶಗಳಲ್ಲಿ ಬ್ಯಾಂಕ್ ಅಕೌಂಟ್, ವಿದೇಶಿ ವ್ಯವಹಾರದಲ್ಲಿ ಹೂಡಿಕೆ ವಿಚಾರವಾಗಿ ಶೋಧ ನಡೆಸಲಾಗುತ್ತಿದೆ. ಸುಬ್ಬಾರೆಡ್ಡಿ ಮಲೇಷ್ಯಾ, ಹಾಂಕಾಂಗ್, ಜರ್ಮನಿಯಲ್ಲಿ ಆಸ್ತಿ ಹೊಂದಿದ್ದಾರೆ.

ಸುಬ್ಬಾರೆಡ್ಡಿ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ.
.₹100 ಕೋಟಿ ಮೊತ್ತದ ಸೈಬರ್ ವಂಚನೆ: ಗುಜರಾತ್, ಮಹಾರಾಷ್ಟ್ರದಲ್ಲಿ ಇ.ಡಿ ದಾಳಿ.₹2,700 ಕೋಟಿ ವಂಚನೆ ಪ್ರಕರಣ: ರಾಜಸ್ಥಾನ, ಗುಜರಾತ್ನ ಹಲವಡೆ ಇ.ಡಿ ದಾಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.