ಬೆಂಗಳೂರು: ‘ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಬಂಧಿತರಾಗಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು’ ಎಂದು ಕೋರಿ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ ಮೆಟ್ಟಿಲೇರಿದೆ.

ಈ ಕುರಿತಂತೆ ಬೆಂಗಳೂರು ಇ.ಡಿ ವಲಯದ ಸಹಾಯಕ ನಿರ್ದೇಶಕ ಅಜಯ ವೈದ್ಯ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಇ.ಡಿ ಪರ ವಕೀಲರು, ‘ಪ್ರತಿವಾದಿ ವಿರೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸಬೇಕು’ ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಪ್ರತಿವಾದಿ ವೀರೇಂದ್ರ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಿತು.

‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು 2025ರ ಡಿಸೆಂಬರ್ 3ರಂದು ಆರೋಪಿ ವೀರೇಂದ್ರ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದರು. ಪಿಎಂಎಲ್ಎ ಕಾಯ್ದೆ–2002ರ ಕಲಂ 3 ಮತ್ತು 4ರ ಅಡಿಯಲ್ಲಿ ವೀರೇಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.