ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಇಲಾಖೆ: ದೂರು, ಸಲಹೆ ದಾಖಲಿಸಲು ವೆಬ್‌ಪೋರ್ಟಲ್‌

Last Updated 13 ಅಕ್ಟೋಬರ್ 2022, 19:38 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಣ ಇಲಾಖೆಯ ಕುಂದು-ಕೊರತೆ, ದೂರುಗಳು, ಸಲಹೆ, ಅಭಿಪ್ರಾಯಗಳನ್ನು ದಾಖಲಿಸಲು ಅನುಕೂಲವಾಗುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆವೆಬ್ ಪೋರ್ಟಲ್‌ ರೂಪಿಸಿದ್ದು ಸಚಿವ ಬಿ.ಸಿ.ನಾಗೇಶ್‌ ಅವರು ಗುರುವಾರ ನೂತನ ಪೋರ್ಟಲ್‌ ಅನಾವರಣಗೊಳಿಸಿದರು.

ಇಲಾಖೆಯ ಕುರಿತು ಅಗತ್ಯ ಮಾಹಿತಿ ಒದಗಿಸುವಶಾಲಾ ಶಿಕ್ಷಣ ಸಚಿವರ ಜಾಲತಾಣ school educationminister.karnataka.gov.in ಪೋರ್ಟಲ್‌ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಸಹ ಭೇಟಿ ನೀಡಿ, ದೂರು, ಸಲಹೆ , ಅಭಿಪ್ರಾಯ ನೀಡಬಹುದು. ಪೋರ್ಟಲ್ ಮೂಲಕ ಸಲ್ಲಿಕೆಯಾಗುವ ದೂರುಗಳನ್ನು ಶೀಘ್ರ ಪರಿಹರಿಸುವ, ದೂರಿನ ಸ್ಥಿತಿ-ಗತಿಗಳನ್ನು ಆನ್‌ಲೈನ್ ಮೂಲಕವೇ ಟ್ರ್ಯಾಕ್ ಮಾಡುವ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ.ವೆಬ್ ಪೋರ್ಟಲ್‌ನಲ್ಲಿ ರಾಜ್ಯದ ಶಾಲೆಗಳ ಸಂಖ್ಯೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಖ್ಯೆ, ಮಧ್ಯಾಹ್ನದ ಬಿಸಿಯೂಟ ಯೋಜನೆ ಸೇರಿದಂತೆ ಎಲ್ಲ ವಿವರ ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಆನ್‌ಲೈನ್‌ ಮೂಲಕ ಸೇವಾ ಸೌಲಭ್ಯ: ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್‌ಲೈನ್ ಮೂಲಕ ಒದಗಿಸುವ ತಂತ್ರಾಂಶ (http://kstbfonline.karnataka.gov.in)ಅಭಿವೃದ್ಧಿಪಡಿಸಲಾಗಿದೆ. ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸದಸ್ಯತ್ವ, ಶಿಕ್ಷಕರು, ವಿದ್ಯಾರ್ಥಿಗಳ ವೈದ್ಯಕೀಯ ಧನಸಹಾಯ, ಶಿಕ್ಷಕರ ಮಕ್ಕಳಿಗೆ ಉನ್ನತ ವ್ಯಾಸಂಗ ಧನ ಸಹಾಯ ಸೇರಿದಂತೆ ಇತರೆ ಸೇವೆಗಳನ್ನು ಪಡೆದುಕೊಳ್ಳಲು ಶಿಕ್ಷಕರು ತಾವು ಕುಳಿತ ಸ್ಥಳದಿಂದಲೇ ಅರ್ಜಿ ಸಲ್ಲಿಸುವ ಮೂಲಕ ಸೇವೆ ಪಡೆದುಕೊಳ್ಳಬಹುದು. ಶಿಕ್ಷಕರು ಈ ಸೇವೆಗಳಿಗಾಗಿ ಬೆಂಗಳೂರಿಗೆ ಅಲೆಯುವುದು ತಪ್ಪಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT