ಬೆಂಗಳೂರು: ಆಂಗ್ಲ ಮಾಧ್ಯಮದ ಖಾಸಗಿ ಶಾಲೆಗಳಿಗೆ ದಶಕಗಳಿಂದಲೂ ಬೇಕಾಬಿಟ್ಟಿ ಅನುಮತಿ ನೀಡುತ್ತಾ ಕನ್ನಡ ಮಾಧ್ಯಮ ಸರ್ಕಾರಿ ಶಾಲೆಗಳನ್ನು ಅವನತಿಯತ್ತ ದೂಡಿದ್ದ ಸರ್ಕಾರ, ಈಗ ಅದೇ ಆಂಗ್ಲ ಮಾಧ್ಯಮದ ಬಿಳಿಲುಗಳನ್ನು ಬಳಸಿಕೊಂಡು ಮಕ್ಕಳನ್ನು ಸೆಳೆಯುವ ಸಾಹಸ ಮುಂದುವರಿಸಿದೆ.

ಪೂರ್ವ ಪ್ರಾಥಮಿಕ ಶಾಲೆಗಳು, ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಧಿಕ ಸಂಖ್ಯೆಯಲ್ಲಿ ಸ್ಥಾಪಿಸುವ ಮೂಲಕ ಆಂಗ್ಲ ಮಾಧ್ಯಮ ಶಿಕ್ಷಣವನ್ನು ವಿಸ್ತಾರಗೊಳಿಸುವ ಹಾಗೂ ಖಾಸಗಿ ಶಾಲೆಗಳ ಪೈಪೋಟಿಯ ನಡುವೆ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆ.

ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ಶಿಕ್ಷಣದವರೆಗೆ ಮಕ್ಕಳಿಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸುವ ಪರಿಕಲ್ಪನೆಯ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ನ ₹2,500 ಕೋಟಿ ನೆರವಿನೊಂದಿಗೆ ಆರಂಭಿಸುತ್ತಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಅಕ್ಷರ– ಆವಿಷ್ಕಾರ ಕಾರ್ಯಕ್ರಮದ ಅಡಿ ₹200 ಕೋಟಿ ವೆಚ್ಚದಲ್ಲಿ 20 ಪಬ್ಲಿಕ್ ಶಾಲೆ ತೆರೆಯಲಾಗುತ್ತಿದೆ.

ಸರ್ಕಾರಿ ಶಾಲೆಗಳಲ್ಲಿ ಕಳೆದ ಸಾಲಿನಲ್ಲಿ 2,619 ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಿದ್ದ ಶಾಲಾ ಶಿಕ್ಷಣ ಇಲಾಖೆ, ಬರುವ ಶೈಕ್ಷಣಿಕ ಸಾಲಿನಲ್ಲಿ ಈ ಸಂಖ್ಯೆಯನ್ನು ಐದು ಸಾವಿರಕ್ಕೆ ಮುಟ್ಟಿಸುತ್ತಿದೆ. ಅದಕ್ಕಾಗಿ ₹70 ಕೋಟಿ ಮೀಸಲಿಡಲಾಗಿದೆ. ಮಕ್ಕಳಲ್ಲಿ ಆಂಗ್ಲಭಾಷಾ ಕೌಶಲ ಬೆಳೆಸಲು ನಾಲ್ಕು ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಆರಂಭಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.