ಬೆಂಗಳೂರು: ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜಿನ ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ.ನಾಗೇಶ್ ಪುನರುಚ್ಚರಿಸಿದ್ದಾರೆ.

‘ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು’ ಎಂದು ಅವರು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.

ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದರು.

ಹಿಜಾಬ್ ಸಮರ್ಥಿಸಿ ಸಿದ್ಧರಾಮಯ್ಯ ಅವರು ಮಾತನಾಡಿದ್ದಾರೆ. ಈ ರೀತಿ ಮಾತನಾಡಲು ಅವರಿಗೆ ನಾಚಿಕೆ ಆಗಬೇಕು. ಓಟಿಗಾಗಿ ಅವರು ಯಾವ ಮಟ್ಟಕ್ಕೂ ಬೇಕಾದರೂ ಹೋಗುತ್ತಾರೆ. ಒಂದು ಸಮುದಾಯದ ಮತಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಅವರ ಅವಧಿಯಲ್ಲೇ ಸಮವಸ್ತ್ರ ನಿಯಮ ಜಾರಿ ಮಾಡಿದ್ದಾರೆ ಎಂದು ಹರಿಹಾಯ್ದರು.

ಇದನ್ನೂ ಓದಿ.. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ: ಸಿದ್ದರಾಮಯ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.