ಬಾಗಲಕೋಟೆ: ‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭವಾಗಲಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ. ಆದರೆ ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ‘ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ 8.74 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. 3,444 ಕೇಂದ್ರಗಳಲ್ಲಿ 48 ಸಾವಿರ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸಲು ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಪ್ರತಿ ಬಾರಿಯಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ 144 ಸೆಕ್ಷನ್ ಜಾರಿ ಇರಲಿದೆ ಎಂದು ತಿಳಿಸಿದರು.

'ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಈಗಾಗಲೇ ಆಯಾ ಶಾಲೆಗಳ ಮುಖ್ಯಸ್ಥರು ಪಾಲಿಸುತ್ತಿದ್ದಾರೆ. ಶಾಲೆಯ ಕಾಂಪೌಂಡ್ ಒಳಗೆ ಹಿಜಾಬ್ ಧರಿಸಿಬರಬಹುದು. ಆದರೆ ಕೊಠಡಿಯೊಳಗೆ ಧರಿಸಲು ಅವಕಾಶವಿಲ್ಲ. ಯಾವುದೇ ಉದ್ದೇಶದಿಂದ ಪರೀಕ್ಷೆಗೆ ಗೈರು ಹಾಜರಾದವರಿಗೆ ಮರು ಪರೀಕ್ಷೆ ಮಾಡುವುದಿಲ್ಲ. ಬದಲಿಗೆ ಪೂರಕ ಪರೀಕ್ಷೆ ಬರೆಯಬಹುದು‘ ಎಂದು ಹೇಳಿದರು.

ಇದನ್ನೂ ಓದಿ:ಭಯಪಡದೆ ಪರೀಕ್ಷೆ ಬರೆಯಿರಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಿಎಂ ಸಲಹೆ

ಆತಂಕ ಪಡುವ ಅಗತ್ಯವಿಲ್ಲ:ಪಠ್ಯಕ್ರಮದ (ಸಿಲೆಬಸ್) ಒಳಗೆ ಪ್ರಶ್ನೆಗಳು ಇರಲಿವೆ. ಹೀಗಾಗಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಆತಂಕ ಬೇಡ. ಈ ಬಾರಿ ಪ್ರಶ್ನೆ ಪತ್ರಿಕೆಯಲ್ಲಿ ಪ್ರಶ್ನೆಗಳ ಆಯ್ಕೆಗೆ (ಚಾಯ್ಸ್) ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಪರ್ಯಾಯ ಪ್ರಶ್ನೆಗಳನ್ನು ತೆಗೆದುಕೊಳ್ಳಬಹುದು ಎಂದರು.

ಪರೀಕ್ಷಾ ಕೇಂದ್ರದಲ್ಲಿ ಪುನರಾವರ್ತಿತ ಹಾಗೂ ಬಾಹ್ಯ ವಿದ್ಯಾರ್ಥಿಗಳಿಗೆ ಸಮವಸ್ತ್ರದಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.